ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸುವವರು ಮುಂಚಿತವಾಗಿಯೇ ಅನುಮತಿ ಪಡೆಯಬೇಕು ಎಂದು ಡಿಸಿ ಡಾ.ಆರ್. ಸೆಲ್ವಮಣಿ DC Selvamani ಅವರು ಸೂಚಿಸಿದ್ದಾರೆ.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ 15 ದಿನ ಮುಂಚಿತವಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು ಅನುಮತಿ ನೀಡಬೇಕು ಅನುಮತಿ ಪಡೆಯಬೇಕು ಎಂದು ಹೇಳಿದರು.
ಲಸಿಕೆ
ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗ ನಿಯಂತ್ರಣಕ್ಕೆ ಆಕಳು, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು ಎಂದರು.
ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕುವರು. ಯಾರೂ ಕೂಡ ತಮ್ಮ ಎಮ್ಮೆ, ದನ ಕರುಗಳು ಲಸಿಕೆಯಿಂದ ವಂಚಿತರಾಗದಂತೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಶೇ.100 ಲಸಿಕಾ ಪ್ರಗತಿ ಸಾಧಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಪೆಟ್ ಶಾಪ್
ಪ್ರ್ರಿವೆನ್ಶನ್ ಆಫ್ ಕ್ರುಯಲ್ಟಿ ಟು ಅನಿಮಲ್ಸ್ (ಪೆಟ್ ಶಾಪ್) ರೂಲ್ಸ್ 2018ರ ಪ್ರಕಾರ ಜಿಲ್ಲೆಯ ಪೆಟ್ ಶಾಪ್ ಮಾಲೀಕರು ತಾವು ಉದ್ದಿಮೆ ಪರವಾನಗಿ ತೆಗೆದುಕೊಳ್ಳುವ ಮುನ್ನ ರೂ.5000 ಶುಲ್ಕ ನೀಡಿ ಜಿಲ್ಲಾ ಪ್ರಾಣಿ ದಯಾ ಸಂಘದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.
Also read: ಶೋಭಾಯಾತ್ರೆಯಲ್ಲಿ ಕುದುರೆಗಳ ನೃತ್ಯಕ್ಕೆ ಜನರು ಫುಲ್ ಫಿದಾ: ವೀಡಿಯೋ ನೋಡಿ
ನೋಂದಣಿ ಮಾಡಿಸಿಕೊಳ್ಳದೇ ಪೆಟ್ ಶಾಪ್ ವಹಿವಾಟು ಮಾಡಿದರೆ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು. ಪ್ರಸ್ತುತ ನೋಂದಣಿಗೆ 15 ಅರ್ಜಿಗಳು ಬಂದಿದ್ದು, ಈ ಸಂಬಂಧ ಸಮಿತಿ ರಚಿಸಿ ನಿಯಮಾನುಸಾರ ಅನುಮೋದನೆ ನೀಡುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ಡಿಸಿ ನೀಡಿದ್ದಾರೆ.
ಸಭೆಯಲ್ಲಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೊಸ್ಟರ್‍ನ್ನು ಡಿಸಿ ಮತ್ತು ಇತರೆ ಅಧಿಕಾರಿಗಳು ಬಿಡುಗಡೆಗೊಳಿಸಿದರು. ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಪಶುವೈದ್ಯರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post