ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಫೆ.1ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮಲ್ನಾಡ್ ಓಪನ್ 5ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು #Karate Tournament ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಂದ್ಯಾವಳಿಯಲ್ಲಿ 6ವರ್ಷ ಮೇಲ್ಪಟ್ಟ ಎಲ್ಲಾ ಕ್ರೀಡಾಪಟುಗಳು ಭಾಗವಹಿಸಬಹುದಾಗಿದ್ದು, ಕಟಾ ಮತ್ತು ಕುಮತಿ ಎಂಬ 2 ವಿಭಾಗಗಳಿರುತ್ತದೆ. ವಿಜೇತರಿಗೆ ಆಕರ್ಷಿಕ ಪದಕ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದರು.
ಈ ಪಂದ್ಯಾವಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದ್ದು, ಇವರಲ್ಲಿ ಸ್ಥಳೀಯ 100 ಕ್ರೀಡಾಪಟುಗಳು ವಿವಿಧ ಶಾಲೆಗಳಿಂದ ಭಾಗವಹಿಸಲಿದ್ದಾರೆ. ಪ್ರವೇಶ ಶುಲ್ಕ 1500 ರೂ. ಇದ್ದು, ಕ್ರೀಡಾಪಟುಗಳಿಗೆ ಊಟ ಮತ್ತು ಪ್ರಥಮಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಂದು ಬೆ.11 ಗಂಟೆಯಿಂದ ಪಂದ್ಯಾವಳಿ ಆರಂಭವಾಗಲಿದ್ದು, ನಗರದ ಗಣ್ಯರು, ಅಧಿಕಾರಿಗಳು ವಿವಿಧ ಶಾಲೆಗಳ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಭಾಗವಹಿಸಲಿದ್ದಾರೆ. ಇಂತಹ ಪಂದ್ಯಾವಳಿಗಳಿAದ ಸ್ಥಳೀಯ ಕ್ರೀಡಾಪಟುಗಳು ಭಾಗವಹಿಸಿ ಹೆಚ್ಚಿನ ಅನುಭವ ಪಡೆಯಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಅನೂಪ್ ಆರ್.ಶೇಖರ್, ಶ್ರೇಯಸ್ ಹೆಚ್.ಎಲ್., ಹರ್ಷಿತಾ ಸಿ., ಪ್ರೀತಿಶ್ರೀ, ಕಾವ್ಯ, ಶ್ರಾವ್ಯ, ಪ್ರಿಯಾಂಕ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















