ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಬೇಸಿಗೆ ಬಿರು ಬಿಸಿಲಿನಿಂದ ಕಂಗೆಟ್ಟಿನದ್ದ ಮಲೆನಾಡಿನ #Malnad ಮಂದಿಗೆ ಆರಂಭದ ಮಳೆ ಒಂದೆಡೆ ಕೊಂಚ ತಂಪು ನೀಡಿದ್ದರೆ, ಇನ್ನೊಂದೆಡೆ ಮೊದಲ ಬಲಿ ಪಡೆದಿದೆ.
ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.
ಜಯಂತ್ ಭಟ್ (64) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















