ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಶಂಕರ ಮಠ ರಸ್ತೆಯಲ್ಲಿನ ಪ್ರದೇಶದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಇಂದು ರಾತ್ರಿ ನಡೆದಿದೆ.
ಪಾಚಾ ಖಾನ್ ಹಾಗೂ ದಸ್ತಗೀರ್ ಎನ್ನುವ ಇಬ್ಬರ ನಡುವೆ ಒಂದು ಲಕ್ಷ ರೂ.ಗಳ ಹಣಕಾಸಿನ ವಿಚಾರದಲ್ಲಿ ಜಗಳ ನಡೆಯುತ್ತಿತ್ತು. ಈ ವೇಳೆ ದಸ್ತಗೀರನ ಪಾಚಾ ಖಾನ್’ಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿದಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಖಾನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post