ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
(Shivamogga) ಶಿವಮೊಗ್ಗದ ಮಾನಸ ಟ್ರಸ್ಟ್‌ನ (Manasa Trust) ಮಾನಸ ವೃತ್ತಿ ತರಬೇತಿ ಕೇಂದ್ರದ ವತಿಯಿಂದ ಎರಡು ವರ್ಷಗಳ ಪೇಷಂಟ್ ಕೇರಿಂಗ್ ಹಾಗೂ (Nursing Training) ನರ್ಸಿಂಗ್ ವೃತ್ತಿ ಕೌಶಲ್ಯ ತರಬೇತಿ ಕೋರ್ಸ್‌ಗಳಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ತರಬೇತಿ ಪರಿಷತ್ (NCVT) ಮಾನ್ಯತೆ ಹೊಂದಿರುವ ಎರಡು ವರ್ಷಗಳ ರೋಗಿಗಳ ಆರೈಕೆ ಕುರಿತ ನರ್ಸಿಂಗ್ ಅಸಿಸ್ಟೆಂಟ್ ತರಬೇತಿ ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Shivamogga : 10ನೇ ತರಗತಿ, ಪಿಯುಸಿ ಉತ್ತೀರ್ಣರಿಗೆ ಅವಕಾಶ
ಈ ಕೋರ್ಸ್‌ಗೆ 10ನೇ ತರಗತಿ ಉತ್ತೀರ್ಣರಾದವರು ಅಥವಾ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ದಾಖಲಾತಿ ಪಡೆಯಲು ಅರ್ಹರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿನಿಯರಿಗೆ ದಾಖಲಾತಿಯಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ.
Also Read>> ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’
ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ₹900 ಸ್ಟೈಫಂಡ್ ನೀಡಲಾಗುತ್ತದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಎರಡು ವರ್ಷಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಗಳಿಗೆ ನರ್ಸಿಂಗ್ ಹಾಗೂ ರೋಗಿಗಳ ಆರೈಕೆ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಸಂಸ್ಥೆ ತಿಳಿಸಿದೆ.
ಇನ್ನೂ 15 ದಿನಗಳ ಕಾಲ ಅವಕಾಶ
ಗ್ರಾಮೀಣ ಪ್ರದೇಶ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಹೆಣ್ಣುಮಕ್ಕಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಾನಸ ನರ್ಸಿಂಗ್ ಹೋಮ್‌ನ ಮುಖ್ಯಸ್ಥರಾದ ಡಾ. ಪ್ರೀತಿ ಶಾನುಭಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಮಾನಸ ನರ್ಸಿಂಗ್ ಹೋಮ್ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದು ದಾಖಲಾತಿ ಮಾಡಿಕೊಳ್ಳಬಹುದು. ಅಥವಾ 94482 88489 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ದಾಖಲಾತಿಗೆ ಇನ್ನೂ 15 ದಿನಗಳ ಕಾಲ ಮಾತ್ರ ಅವಕಾಶ ಇರುವುದರಿಂದ ಅರ್ಹ ಅಭ್ಯರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










