ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಮಂಡ್ಯ |
ಸಂಕ್ರಾಂತಿ ಪ್ರಯುಕ್ತ ಹೋರಿ ಬೆದರಿಸುವ ಹಬ್ಬದ ವೇಳೆ ಶಿವಮೊಗ್ಗದಲ್ಲಿ ಇಬ್ಬರು ಬಲಿಯಾಗಿದ್ದು, ಮಂಡ್ಯದಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಶಿವಮೊಗ್ಗದ ಆನವಟ್ಟಿಯ ಮಳ್ಳೂರು ಹೋರಿ ಬೆದರಿಸುವ ಹಬ್ಬದ ವೇಳೆ ರಂಗನಾಥ್(24) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದನು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಕೊನಗವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಲೋಕೇಶ್(32) ಎಂಬ ಯುವಕನ ಎದೆಗೆ ಹೋರಿ ಕೊಂಬಿನಿಂದ ತಿವಿದಿದ್ದು, ಆತನ ಮೃತಪಟ್ಟಿದ್ದಾನೆ.
ಕೊನಗವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ತೆರಳಿದ್ದವರಲ್ಲಿ ಆರು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇನ್ನು, ಮಂಡ್ಯದ ಹೊಸಹಳ್ಳಿಯಲ್ಲಿ ರಾಸುಗಳ ಕಿಚ್ಚು ಹಾಯಿಸುವ ವೇಳೆ ವಿನೋದ್ ಎಂಬ ಯುವಕನಿಗೆ ಗೂಳಿಯೊಂದು ತಿವಿದಿದ್ದು, ಆತನ ಕುತ್ತಿಗೆ ಭಾಗಕ್ಕೆ ತೀವ್ರತರವಾದ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post