ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐಎಸ್’ಐಎಸ್ ಉಗ್ರ ಸಂಘಟನೆ ಜೊತೆಯಲ್ಲಿ ನಂಟು ಹೊಂದಿರುವ ಆರೋಪದಲ್ಲಿ ಬಂಧನಗೊಂಡಿರುವ ತೀರ್ಥಹಳ್ಳಿಯ ಮಾಜ್ ಮುನೀರ್ ತಂದೆ ಮುನೀರ್ ಅಹಮದ್(56) ಹೃದಯಾಘಾತದಿಂದ ನಿಧನರಾಗಿದ್ದಾರೆ.
ತೀರ್ಥಹಳ್ಳಿ ನಿವಾಸಿಯಾಗಿದ್ದ ಇವರು ಮೀನು ವ್ಯಾಪಾರ ಮಾಡಿಕೊಂಡಿದ್ದರು. ಸದ್ಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಂಗಳೂರಿನಲ್ಲಿ ನೆಲೆಸಿದ್ದರು. ಮಗನನ್ನು ಬಂಧಿಸಿದ ನಂತರ ಕುಗ್ಗಿ ಹೋಗಿದ್ದ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಇನ್ನು, ಮುನೀರ್ ಅಹಮದ್ ಅವರ ಅಂತ್ಯಸಂಸ್ಕಾರ ನಾಳೆ ನಡೆಯಲಿದ್ದು, ತಂದೆಯ ಅಂತ್ಯಸಂಸ್ಕಾರ ದಲ್ಲಿ ಪಾಲ್ಗೊಳ್ಳಲು ಮಾಜ್’ಗೆ ಅನುಮತಿ ನೀಡಲಾಗಿದೆ. ನಾಳೆ ತೀರ್ಥಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದ್ದು, 11 ಗಂಟೆ ವೇಳೆಗೆ ಮಾಜ್’ನಲ್ಲಿ ಪೊಲೀಸ್ ಭದ್ರತೆಯಲ್ಲಿ ಕರೆದುಕೊಂಡು ಹೋಗಲಾಗುತ್ತದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post