ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಗೊಟಗೋಡಿ ಜಾನಪದ ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮಾರ್ಚ್ 1ರ ಸೋಮವಾರ ಬೆಳಿಗ್ಗೆ 10:30ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಪ್ರಚಾರ ಅಭಿಯಾನ ಕುರಿತು ಸಂವಿಧಾನ ಓದು ಎಂಬ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿದೆ.
ರಾಸೇಯೋ ಕೋಶ ರಾಜ್ಯ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಧ್ಯಕ್ಷತೆ ವಹಿಸಲಿದ್ದು, ಗೊಟಗೋಡಿ ಜಾನಪದ ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ. ಎನ್.ಎಮ್. ಸಾಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗ ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲ ಡಾ.ಜಗದೀಶ್, ಚಿಂತಕರು ಹಾಗೂ ಲೇಖಕ ಡಾ. ಸದಾಶಿವ ಮರ್ಜಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ಕ್ರಮವಾಗಿ ಸಂವಿಧಾನ ಮತ್ತು ರಾಜಕೀಯ ನ್ಯಾಯ, ಸಂವಿಧಾನ ಮತ್ತು ಅಂಬೇಡ್ಕರ್ ವಿಷಯ ಕುರಿತು ಮಾತನಾಡಲಿದ್ದಾರೆ.
ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ, ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆ, ಪ್ರೊ. ಕೆ.ಎನ್. ಗಂಗಾನಾಯಕ್ ಉಪಸ್ಥಿತರಿರಲಿದ್ದಾರೆ ವಿವಿ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post