ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪತ್ರಿಕಾ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಸೆರೆ ಹಿಡಿದ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವು ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ದಿನಾಂಕ 13 ಮತ್ತು 14 ರಂದು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ನಾಗರಾಜ್ ರವರು ವಿಭಿನ್ನ ಆಯಾಮ ಕೋನಗಳಲ್ಲಿ ಛಾಯಾಚಿತ್ರಗಳನ್ನು ತೆಗೆಯುವಲ್ಲಿ ಅಪಾರ ಪರಿಶ್ರಮ ತೋರುವ ಇವರು, ಸುದ್ದಿಚಿತ್ರಗಳ ಜೊತೆಯಲ್ಲಿಯೇ ವಿಶೇಷ ಚಿತ್ರಗಳನ್ನು ಸೆರೆಹಿಡಿಯುವಲ್ಲಿ ಪರಿಣಿತಿ ಸಾಧಿಸಿದ್ದಾರೆ.
ನಾಗರಾಜ್ ರವರು, ತಮ್ಮ ಕ್ರಿಯಾಶೀಲ ಛಾಯಾಗ್ರಹಣಕ್ಕಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಹಾಗೂ ದಸರಾ ಛಾಯಾಚಿತ್ರ ಸ್ಪರ್ಧೆ, ಆಳ್ವಾಸ್ ನುಡಿಸಿರಿ ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನ ಹಾಗೂ ಬೆಂಗಳೂರಿನ ಕೆಪಿಎ ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನ, ದೆಹಲಿಯ ವೈಲ್ಡ್ ಲೈಫ್ ಫೋಟೋಗ್ರಫಿ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿದಂತೆ ಇತರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಾಂಗ್ಲಾದೇಶದ ಅಗಿಲೆ ಫೋಟೋಗ್ರಫಿಕ್ ಸೊಸೈಟಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಆನರಬಲ್ ಮೆನ್ಸನ್ ಗೌರವ ಸೇರಿದಂತೆ ಅಮೇರಿಕಾದ ನ್ಯೂಯಾರ್ಕ್, ನಾರ್ತ್ ಮೆಸಿಡೋನಿಯಾ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಇವರ ಛಾಯಾಚಿತ್ರಗಳು ಪ್ರದರ್ಶನಗೊಂಡಿದೆ.
ಪತ್ರಿಕಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅತ್ಯುತ್ತಮ ಛಾಯಾಚಿತ್ರಕ್ಕಾಗಿ ಕೊಡಮಾಡುವ ಪ್ರಮೋದ್ ಮೆಳ್ಳಿಗಟ್ಟಿ ಪ್ರಶಸ್ತಿ ನೀಡಿ ಗೌರವಿಸಿದೆ. ಬಸವಕೇಂದ್ರ, ಬೆಕ್ಕಿನ ಕಲ್ಮಠ, ಪತಂಜಲಿ ಯೋಗ ಸಂಸ್ಥೆ, ಪರಿಸರ ಪ್ರೇಮಿಗಳ ಬಳಗ, ಶಿವಮೊಗ್ಗ ವೀಡಿಯೋ ಮತ್ತು ಫೋಟೋಗ್ರಾಫರ್ಸ್ ಅಸೋಸಿಯೇಷನ್, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹತ್ತು ಹಲವು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದೆ.
ವಿಶೇಷವೆಂದರೆ, ತಾವು ಕಲಿತ ಸಹ್ಯಾದ್ರಿ ಕಾಲೇಜಿನಲ್ಲಿಯೂ ಕೂಡಾ ನಾಗರಾಜ್‌ರವರು ಪುರಸ್ಕರಿಸಲ್ಪಟ್ಟಿದ್ದಾರೆ.
ಪರಿಸರದ ಜಾಗೃತಿಗಾಗಿ ಶಾಲಾ-ಕಾಲೇಜುಗಳಲ್ಲಿ ಇವರು ಚಿತ್ರಿಸಿದ ವನ್ಯಜೀವಿಗಳ ಛಾಯಾಚಿತ್ರಗಳು ಪ್ರದರ್ಶನಗೊಂಡಿವೆ.
ಕುವೆಂಪು ರಂಗಮಂದಿರ, ಕರ್ನಾಟಕ ಸಂಘ ಸೇರಿದಂತೆ ಹಲವೆಡೆ ಇವರ ಅಪರೂಪದ ಗ್ರಾಮೀಣ ಬದುಕು ಪ್ರಕೃತಿ ಪರಿಸರ ವನ್ಯಜೀವಿ ಸೇರಿದಂತೆ ಅನೇಕ ಬಗ್ಗೆ ಚಿತ್ರಗಳು ಪ್ರದರ್ಶನಗೊಂಡಿದೆ. ಅಲ್ಲದೇ ಇವರು ಕುವೆಂಪು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಛಾಯಾಚಿತ್ರ ಸ್ಪರ್ಧೆಗಳ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.
ಜೊತೆಗೆ ಶಿವಮೊಗ್ಗದ ಜಿಲ್ಲಾಡಳಿತವು ಏರ್ಪಡಿಸಿದ್ದ ಸಹ್ಯಾದ್ರಿ ಉತ್ಸವ ಕಾರ್ಯಕ್ರಮದ ಛಾಯಾಚಿತ್ರ ಸ್ಪರ್ಧೆಯ ತೀರ್ಪುಗಾರರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಛಾಯಾಗ್ರಹಣ ಕುರಿತಾದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















