ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎಸ್.ಕೆ. ಮರಿಯಪ್ಪ S K Mariyappa ಹಾಗೂ ಖಜಾಂಚಿಯಾಗಿ ರುಕ್ಮಿಣಿ ವೇದವ್ಯಾಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2022-23ನೆಯ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾಂಕಿನ ಹಿರಿಯ ನಿರ್ದೇಶಕರು, ಮಾಜಿ ಮೇಯರ್ ಎಸ್.ಕೆ. ಮರಿಯಪ್ಪ ಅಧ್ಯಕ್ಷರಾಗಿ ಹಾಗೂ ಹಿರಿಯ ಸಹಕಾರಿ ರುಕ್ಮಿಣಿ ವೇದವ್ಯಾಸ ಅವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾದರು.
ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಚುನಾವಣಾ ಅಧಿಕಾರಿಗಳು ಅಧ್ಯಕ್ಷರು ಹಾಗೂ ಖಜಾಂಚಿ ಚುನಾವಣೆ ನಡೆಸಿದರು.
Also read: ರಿಪ್ಪನ್’ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ
ಬ್ಯಾಂಕಿನ ಉಪಾಧ್ಯಕ್ಷ ಕೆ. ರಂಗನಾಥ್ ಹಾಗೂ ಎಲ್ಲಾ ನಿರ್ದೇಶಕರು ಇವರಿಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post