ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ನರಸಾಪುರ ಗ್ರಮದ ಮನೋಜ್ (21) ಬಂಧಿತ ಆರೋಪಿಯಾಗಿದ್ದು, ಈತ ದೇವಂಗಿ ಲೇಔಟಿನ ಕೀರ್ತಿನಗರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ಬಂಧಿಸಿದ ಪೊಲೀಸರು 30ಸಾವಿರ ರೂ.ಬೆಲೆಯ 1.105 ಕೆಜಿ ಒಣ ಗಾಂಜಾ ಮತ್ತು ಮೊಬೈಲ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also read: ದೇವಸ್ಥಾನದ ಬೀಗ ಮುರಿದು ಆಭರಣ ಕಳ್ಳತನ: ಇಬ್ಬರ ಬಂಧನ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















