ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ನಗರದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಆ.13ರ ಶನಿವಾರದಂದು 108 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ.
ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಅ.ಪ. ರಾಮಭಟ್ಟ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಕ್ತರ ಕಂಟಕಗಳ ನಿವಾರಣೆ, ಇಷ್ಟಾರ್ಥ ಸಿದ್ಧಿ, ಸಕಲ ಸೌಭಾಗ್ಯ ಪ್ರಾಪ್ತಿಗಾಗಿ ಈ ವಿಶೇಷ ಪೂಜಾ ಕೈಂಕರ್ಯ ಏರ್ಪಡಿಸಲಾಗಿದ್ದು, ಭಕ್ತಾದಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಕೋರಲಾಗಿದೆ.

ವಿಶೇಷ ಸೂಚನೆ : ಶ್ರಾವಣ ಮಾಸ (ಶ್ರಾವಣ ಶನಿವಾರ) ಅಂಗವಾಗಿ ಬೆಳಿಗ್ಗೆ 10.30ಕ್ಕೆ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.
Also read: ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನಕ್ಕೆ ಸಂಸದ ರಾಘವೇಂದ್ರ ಚಾಲನೆ










Discussion about this post