No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅವೈಜ್ಞಾನಿಕ ಕಾಮಗಾರಿ ವಿರುದ್ಧ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ

kalpa News by kalpa News
July 9, 2025
in ಶಿವಮೊಗ್ಗ
0
ಅವೈಜ್ಞಾನಿಕ ಕಾಮಗಾರಿ ವಿರುದ್ಧ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾ ನಾಲೆ ಸೀಳಿರುವುದನ್ನು ವಿರೋಧಿಸಿ ಇಂದು ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ಕಚೇರಿಗೆ ಭಾರೀ ಸಂಖ್ಯೆಯಲ್ಲಿ ರೈತರು ಆಗಮಿಸಿ ಸಾಗರ ರಸ್ತೆಯ ಎರಡೂ ಬದಿಯಲ್ಲಿ ಬಂದ್ ಮಾಡಿ ಸ್ಥಳದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿ, ಬೇಡಿಕೆ ಈಡೇರಿಸುವ ಭರವಸೆ ಲಿಖಿತ ರೂಪದಲ್ಲಿ ಕೊಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದ್ದಾರೆ.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಶಿವಮೊಗ್ಗದ ಪ್ರವಾಸಿಮಂದಿರದಲ್ಲಿ ಸಭೆ ನಡೆಸಿ ಅಲ್ಲಿಂದ ತುಂಗಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ರಸ್ತೆ ಬಂದ್ ಮಾಡಿ ಸಭೆ ನಡೆಸಿದರು.
ದಾವಣಗೆರೆ ಜಿಲ್ಲೆ ರೈತ ಒಕ್ಕೂಟದ ವತಿಯಿಂದ ತುಂಗಾ ಮೇಲ್ದಂಡೆ ಯೋಜನಾ ಕಚೇರಿಗೆ ಮುತ್ತಿಗೆ ಹಾಕುವ ಮೊದಲು ರೈತ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರೇಣುಕಾಚಾರ್ಯ, ಅವೈಜ್ಞಾನಿಕ ಕಾಮಗಾರಿ ವಿರುದ್ಧ ವೈಜ್ಞಾನಿಕ ಹೋರಾಟ ಆರಂಭಿಸಿದ್ದೇವೆ. ನಮ್ಮ ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೋರಾಟದ ಕಿಚ್ಚು ಹಚ್ಚಿದ್ದು ಶಿವಮೊಗ್ಗ ಜಿಲ್ಲೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮಗೆಲ್ಲಾ ಪ್ರೇರಣೆ. ರಾಜ್ಯ ಸರ್ಕಾರ ಕಣ್ಣಿಗೆ ಕಪ್ಪು ಪಟ್ಟಿ ಹಚ್ಚಿ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿದರು.

ವೈಯಕ್ತಿಕವಾಗಿ ಸಿಎಂ, ಡಿಸಿಎಂ ವಿರುದ್ಧ ಟೀಕೆ ಮಾಡಲ್ಲ. ಕುರ್ಚಿ ಕದನ ನಡೀತಿದೆ. ರೈತರ ಪರ ಕೆಲಸ ಮಾಡಲು ಸಮಯ ಇಲ್ಲ. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸ್ತೀವಿ. ರಕ್ತ ಚೆಲ್ಲಿಯಾದರೂ ರೈತರಿಗೆ ನ್ಯಾಯ ಕೊಡಿಸ್ತೀವಿ ಎಂದು ಹೇಳಿದರು.

ಮಾಡಾಳು ಮಲ್ಲಿಕಾರ್ಜುನ ಮಾತನಾಡಿ, 65000 ಎಕರೆ ಪ್ರದೇಶಕ್ಕೆ ನೀರಿಲ್ಲ, ಅಧಿಕಾರಿಗಳು ಮಾಡಿದ ಯಡವಟ್ಟು ಇದಾಗಿದೆ. ಬೇಸಿಗೆಯಲ್ಲೇ ಎಡದಂಡೆ ನಾಲೆಗೆ ಗೇಟ್ ಕೂರಿಸಬೇಕಿತ್ತು. ಕೇವಲ 50 ಲಕ್ಷ ರೂ. ಹಣದಲ್ಲಿ ಆಗುವ ಕೆಲಸ ಮಾಡದೇ ಈಗ ಡ್ಯಾಂ ಖಾಲಿ ಮಾಡಲು ದಿನಾಲು 5000 ಕ್ಯುಸೆಕ್ ಬಿಡ್ತಾ ಇದ್ದಾರೆ. ಭದ್ರಾ ಬಲದಂಡೆ ಕಾಲುವೆಯಿಂದ ಕುಡಿಯುವ ನೀರು ಕೊಡಬೇಡಿ ಎಂದರು.

ಅಧಿಕಾರಿಗಳು ಸರ್ಕಾರದ ಏಜೆಂಟರಾಗಿ ರೈತ ವಿರೋಧಿ ಕೆಲಸ ಮಾಡುತ್ತಿದ್ದಾರೆ. ರೈತರ ಹೊಟ್ಟೆಯ ಮೇಲೆ ತಣ್ಣಿರು ಬಟ್ಟೆ ಹಾಕಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಮಾಜಿ ಶಾಸಕ ಎಂ. ಬಸವರಾಜ ನಾಯಕ, ಮಾತನಾಡಿ, ಇಂದಿನದ್ದು ನಾಲ್ಕನೇ ಹೋರಾಟ. ಬಲದಂಡೆ ನಾಲೆ 7 ಅಡಿ ಸೀಳಿ ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿಗಳು ಇನ್ನೂ ಈ ಕಡೆ ತಲೆ ಹಾಕಿಲ್ಲ. ಯಾವ ಹೋರಾಟಕ್ಕೂ ಹೇಸುವುದಿಲ್ಲ. ಮುಖ್ಯಮಂತ್ರಿಗಳು, ಉಪಮುಖ್ಯ ಮಂತ್ರಿಗಳು ನಮ್ಮ ಹೋರಾಟವನ್ನು ಉಪೇಕ್ಷೆ ಮಾಡುತ್ತಿದ್ದಾರೆ ಎಂದರು.

ಕುಡಿಯುವ ನೀರು ಕೊಡಲು ನಮ್ಮ ವಿರೋಧವಿಲ್ಲ ಆದರೆ, ಅನುಸರಿಸಿದ ವಿಧಾನಕ್ಕೆ ನಮ್ಮ ವಿರೋಧವಿದೆ. ರೈತರ ನಡುವೆ ಕಿಚ್ಚು ಹಚ್ಚಲು ಸರ್ಕಾರ ಹೊರಟಿದೆ. ದಾವಣಗೆರೆ ಜಿಲ್ಲೆಯ ರೈತರ ಆರ್ಥಿಕ ಸ್ಥಿತಿಗೆ ಬೆಂಕಿ ಹಚ್ಚಿದೆ. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಿ ಕಾಮಗಾರಿ ನಿಲ್ಲಿಸದಿದ್ದರೆ ಅನಿರ್ದಿಷ್ಟವಾಧಿ ಹೋರಾಟ ಮುಂದುವರೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಧನಂಜಯ ಕಡ್ಳೇಬೇಳೆ, ಕೊನಗನಳ್ಳಿ ಸತೀಶ್, ನಾಗರಾಜ ಲೋಕಿಕೇರೆ, ಅಜಯಕುಮಾರ್, ಚಂದ್ರಶೇಖರ ಪೂಜಾರ್, ರಾಜಶೇಖರ ನಾಗಪ್ಪ, ಶಿವಕುಮಾರ, ನಾರಾಯಣ, ವಿರೂಪಾಕ್ಷಪ್ಪ ಮೊದಲಾದವರಿದ್ದರು.

ಸ್ಥಳಕ್ಕೆ ಸಿಇಒ ಹೇಮಂತ್ ಕುಮಾರ್ ಮನವಿ ಪಡೆದರೂ ರೈತರು ಪ್ರತಿಭಟನೆ ನಿಲ್ಲಿಸಲು ಒಪ್ಪಲಿಲ್ಲ. ಪ್ರತಿಭಟನೆ ಮುಂದುವರೆದಿದೆ.

ರೈತರ ಪ್ರತಿಭಟನೆಯಿಂದಾಗಿ ಸಾಗರ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿಯ ಎಲ್ಲ ಕಾರ್ಯಕರ್ತರೂ ಪ್ರಧಾನಿ ಮೋದಿಯ ರಾಯಭಾರಿಗಳಾಗಬೇಕು

Next Post

ಬೆಂಗಳೂರು-ಸಿಂಧನೂರು ರೈಲ್ವೆ ಪ್ರಯಾಣಿಕರೇ ಗಮನಿಸಿ! ನಿಮಗಿದೆ ಮಹತ್ವದ ಮಾಹಿತಿ

kalpa News

kalpa News

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಬೆಂಗಳೂರು-ಸಿಂಧನೂರು ರೈಲ್ವೆ ಪ್ರಯಾಣಿಕರೇ ಗಮನಿಸಿ! ನಿಮಗಿದೆ ಮಹತ್ವದ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL