No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪನವರಿಗೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯ ಪರಮಾತ್ಮ ಕರುಣಿಸಲಿ: ಪೇಜಾವರ ಶ್ರೀ ಹಾರೈಕೆ

kalpa News by kalpa News
June 10, 2026
in ಶಿವಮೊಗ್ಗ
1
ಈಶ್ವರಪ್ಪನವರಿಗೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯ ಪರಮಾತ್ಮ ಕರುಣಿಸಲಿ: ಪೇಜಾವರ ಶ್ರೀ  ಹಾರೈಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಕೆ.ಎಸ್. ಈಶ್ವರಪ್ಪನವರಿಗೆ ಮುಂದಿನ ದಿನದಲ್ಲಿ ಸರ್ಕಾರದ ನೇತೃತ್ವ ವಹಿಸುವ ಭಾಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು Shri Vishwaprasanna Swamiji of Udupi Pejawara Mutt ಹರಸಿದ್ದಾರೆ.

ಅವರು ಇಂದು ಕೆ.ಎಸ್.ಈಶ್ವರಪ್ಪ K S Eshwarappa ಅಭಿಮಾನಿ ಬಳಗದ ಸಹಕಾರದೊಂದಿಗೆ ಶ್ರೀಗಂಧ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್‍ ವತಿಯಿಂದ ಮಲ್ಲೇಶ್ವರ ನಗರದ ಕೆ.ಎಸ್.ಈಶ್ವರಪ್ಪನವರ ಮನೆಯ ಬಳಿ ಹಮ್ಮಿಕೊಂಡಿದ್ದ ಅವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ರುದ್ರಪಠಣ, ಮಂಗಳನಿಧಿ ಸಮರ್ಪಣೆ, ಸಂಗೀತಾಭಿವಂದನೆ ಸಮೂಹ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಭಾಂಗಣ ಪ್ರವೇಶಿಸುವಾಗ ಫ್ಲೆಕ್ಸ್‍ನಲ್ಲಿ ಈಶ್ವರಪ್ಪನವರಿಗೆ 78ನೇ ಹುಟ್ಟುಹಬ್ಬ ಎಂದಿತ್ತು. ಎಲ್ಲೋ ಅದು ತಪ್ಪಾಗಿದೆ ಎಂದು ಅನಿಸಿತು. ಏಕೆಂದರೆ ಅವರು 28ರ ಯುವಕರಂತೆ ಸಮಾಜಕ್ಕಾಗಿ ಕ್ರೀಯಾಶೀಲರಾಗಿ ಬದುಕುತ್ತಿದ್ದಾರೆ. ಧರ್ಮದ, ಹಿಂದುತ್ವದ ಪ್ರಶ್ನೆ ಬಂದಾಗ ತನ್ನ ಹಿತವನ್ನು ಬಯಸದೆ ಸಮಾಜಕ್ಕಾಗಿ ಬದುಕುವುದೇ ನಿಜವಾದ ಬದುಕು ಎಂದು ತಿಳಿದು ಸಾಂಸ್ಕøತಿಕ, ಸಾಮಾಜಿಕ  ಹಾಗೂ ಧಾರ್ಮಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಮಾಜದೊಂದಿಗೆ ಬೆರೆತು ಜೀವನ ನಡೆಸುತ್ತಿದ್ದಾರೆ. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಭಗವಂತ ಅವರಿಗೆ ಆಯಸ್ಸು, ಆರೋಗ್ಯ, ಸುಖ-ಸಂತೋಷ ಎಲ್ಲವನ್ನು ಕರುಣಿಸಲಿ ಎಂದು ಆಶೀರ್ವದಿಸಿದರು.

ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಶ್ರೀಗಳು ಮಾತನಾಡಿ, 78ರ ವಯಸ್ಸಿನಲ್ಲಿಯೂ ಅವರ ವ್ಯಕ್ತಿತ್ವ, ಕ್ರೀಯಾಶೀಲತೆ, ಮಾನಸಿಕ ಸದೃಢತೆ, 28ರ ಯುವಕರದ್ದಾಗಿದೆ. ಅವರ ಜೀವನದ ಏರು-ಏರು ಏನೇ ಇರಲಿ, ಧರ್ಮ ಬಿಟ್ಟುಕೊಡಲಿಲ್ಲ. ರಾಜೀ ಮಾಡಿಕೊಂಡಿಲ್ಲ. ತಮ್ಮ ಸ್ಥಾನಮಾನ ಬಿಟ್ಟಿದ್ದಾರೆಯೇ ಹೊರತು, ತತ್ವವನ್ನು ಬಿಟ್ಟಿಲ್ಲ. ಹೋರಾಟದಿಂದಲೇ ರಾಜಕೀಯ ಅಸ್ವಿತ್ವ ಗಳಿಸಿಕೊಂಡವರು. ಸಮಾಜಕ್ಕೋಸ್ಕರ ಹಾಗೂ ಧರ್ಮಕ್ಕೋಸ್ಕರ ತಮ್ಮ ಜೀವನವನ್ನೇ ಮುಡಿಪಾಗಿಟ್ಟುಕೊಂಡವರು. ಅವರು ಶತಾಯುಷಿಗಳಾಗಿ ಬದುಕಿ-ಬಾಳಲಿ. ಇನ್ನೂ ಹೆಚ್ಚಿನ ದೇಶ ಸೇವೆ ಮಾಡಲಿ ಎಂದು ಹಾರೈಸಿದರು.
ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಮಾತನಾಡಿ, ನೂರಾರು ವರ್ಷ ಯಾತಕ್ಕಾಗಿ ಬದುಕಬೇಕು ? ಹೇಗೆ ಬದುಕಬೇಕು ಎಂಬುದನ್ನು ಪ್ರತಿಯೊಬ್ಬರೂ ತಮ್ಮ ಆತ್ಮಕ್ಕೆ ತಾವೇ ಪ್ರಶ್ನೆ ಹಾಕಿಕೊಳ್ಳಬೇಕು. ನಮ್ಮ ಬದುಕು ನಮ್ಮ ಸ್ವಾರ್ಥಕ್ಕಾಗಿ ಅಲ್ಲ, ಪರಾರ್ಥವಾಗಿ, ಸಕಲ ಜೀವಿಗಳಿಗಗಿ, ಕಿಂಚತ್ತಾಗಿ ಬದುಕಿದಾಗ ಮಾತ್ರ ಜನ್ಮಕ್ಕೆ ಸಾರ್ಥಕತೆ ಬರುತ್ತದೆ. ಜಾತಿ, ಮತ, ಪಂಥದ ನಿರ್ಬಂಧವಿಲ್ಲದೆ, ಸರ್ವರಿಗೂ ಆತ್ಮೀಯರಾಗಿ ಈಶ್ವರಪ್ಪನವರು ಬೆಳೆದಿದ್ದಾರೆ. ಹುಟ್ಟು-ಸಾವು ಎನ್ನುವುದು ಖಾಯಂ. ಇದರ ಮಧ್ಯದಲ್ಲಿ ಇರುವ ಜೀವನವೇ ಬಹಳ ಮುಖ್ಯ. ಒಳ್ಳೆಯ ಕಾರ್ಯಗಳನ್ನು ಪಟ್ಟುಹಿಡಿದು ಸಾಧಿಸುವ ಛಲ ಇದ್ದವರು ಈಶ್ವರಪ್ಪ. ಎಲ್ಲಾ ಮಠ-ಮಂದಿರಗಳ ಕಲ್ಯಾಣ ಕಾರ್ಯಗಳಲ್ಲಿ ಅವರು ಕೈಜೋಡಿಸಿದ್ದಾರೆ. ಮಾತುಬಾರದ ಮೂಕ ಪ್ರಾಣಿಗಳಾದ ಗೋವುಗಳ ಸಂರಕ್ಷಣೆಗೆ ಸಂಘ ಸ್ಥಾಪಿಸಿ, ಗೋವರ್ಧನ ಟ್ರಸ್ಟ್ ಮೂಲಕ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.

ಆದಿ ಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಸ್ವಾಮೀಜಿ ಮಾತನಾಡಿ, ಹುಟ್ಟಿದಾಗ ಹುಸಿರು ಇರುತ್ತೆ. ದೇಹತ್ಯಾಗ ಮಾಡುವಾಗ ಬಿಟ್ಟುಹೋದ ದಾನ, ಧರ್ಮದ ಹೆಸರು ಇರುತ್ತದೆ. ಈಶ್ವರಪ್ಪನವರ ಸಾಧನೆ ಅವರಿಗೆ ಕೀರ್ತಿ, ಯಶಸ್ಸು ತಂದಿದೆ. ಅದಕ್ಕಾಗಿಯೇ ಅವರನ್ನು ಹರಸಲು ಜಗದ್ಗುರುಗಳು, ಯತಿವರೇಣ್ಯರು, ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಬಂದಿದ್ದಾರೆ. ರಕ್ತದನ ಶಿಬಿರ, ಶಾಲಾ ಮಕ್ಕಳಿಗೆ ಬುಕ್ ವಿತರಣೆ, ಸಾಮೂಹಿಕ ಸತ್ಯನಾರಾಯಣ ಪೂಜೆ,  ಸಾಮೂಹಿಕ ರುದ್ರ ಪಠಣ, 500ಕ್ಕೂ ಹೆಚ್ಚು ಮಾತೆಯರಿಂದ ದೇಶೌಭಕ್ತಿ ಗೀತೆ ಗಾಯನ ಹಮ್ಮಿಕೊಂಡು ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ಮಾಡಿ, ವಿಭಿನ್ನವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

Also read: ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

ಮಂಗಳನಿಧಿಯನ್ನು ಸ್ವೀಕರಿಸಿದ ಆರ್‍ಎಸ್‍ಎಸ್ ಮುಖಂಡ ಪಟ್ಟಾಭಿ ಮಾತನಾಡಿ, ನಮ್ಮ ಸಮಾಜದಲ್ಲಿ ವಿಶೇಷ ಪರಂಪರೆ ಇದ್ದು, ಯಾವುದೇ ಕಾರ್ಯವನ್ನು ಮಾಡುವಾಗ ಮೊದಲು ದೇವರು, ಗುರುಗಳನ್ನು ಹಾಗೂ ಬಂಧುಗಳನ್ನು ಕರೆದು ಸತ್ಕರಿಸಿ, ಕೃತಜ್ಞತಾ ಪೂರ್ವಕವಾಗಿ ಫಲ-ತಾಂಬೂಲ ಕೊಡುವ ಪದ್ಧತಿ ಇದೆ. ದೇವಋಣ, ಪಿತೃಋಣ, ಋಷಿಮುನಿಗಳ ಋಣ ತೀರಿಸಲಾಗುವುದಿಲ್ಲ. ಇಡೀ ಸಮಾಜ ಭಗವಂತನ ಒಂದು ಅಂಶ ಎಂದು ಮನಗಂಡು,  ಸಮಾಜಕ್ಕಾಗಿ ಕೃತಜ್ಞತಾ ಪೂರ್ವಕವಾಗಿ ಈ ಮಂಗಳ ನಿಧಿಯನ್ನು ಈಶ್ವರಪ್ಪನವರ ಕುಟುಂಬ ಸಮರ್ಪಿಸಿದೆ.

ಈ ನಿಧಿಯನ್ನು ನಾವು ಸಂಘದ ಕಾರ್ಯಕ್ಕೆ ಬಳಸದೆ ಮಂಗಳ ಕಾರ್ಯಕ್ಕೆ ಬಳಸುತ್ತೇವೆ ಈಶ್ವರಪ್ಪನವರಿಗೆ 82ನೇ ವರ್ಷಕ್ಕೆ  ಸಹಸ್ರ ಚಂದ್ರ ದರ್ಶನ ಶಾಂತಿಯೂ ಆಗಲಿ. ಹಿಂದುತ್ವ, ಸಂಘನಿಷ್ಠೆ, ದೇಶ ಮತ್ತು ಗುರುಗಳ ವಿಷಯದಲ್ಲಿ ಅವರು ಎಂದೂ ರಾಜೀಮಾಡಿಕೊಂಡಿಲ್ಲ. ಅವರ ಇಡೀ ಜೀವನದ ಯಶಸ್ಸಿನ ಸಿಂಹಪಾಲು ಅವರ ಶ್ರೀಮತಿಗೆ ಸಲ್ಲಬೇಕು ಎಂದರು.

ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಾತೆಯರಿಂದ ಭಕ್ತಿಗೀತೆ ಮತ್ತು ದೇಶಭಕ್ತಿಗೀತೆ, ಸಾಮೂಹಿಕ ಗಾಯನ ನಡೆಯಿತು.

ಈ ಸಂದರ್ಭದಲ್ಲಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಉತ್ತರ ಕರ್ನಾಟಕ ಭಾಗದ  ಹಲವಾರು ಶ್ರೀಗಳು, ಪ್ರಮುಖರಾದ ಎಂಎಲ್‍ಸಿ ಡಿ.ಎಸ್. ಅರುಣ್, ಬಿ.ಕೆ.ಮೋಹನ್‍ಕುಮಾರ್, ಶ್ರೀಗಂಧ, ರಾಷ್ಟ್ರಭಕ್ತರ ಬಳಗ, ಗೋವರ್ಧನ ಟ್ರಸ್ಟ್ ಹಾಗೂ ಭಜನಾ ಪರಿಷತ್‍ನ ಪದಾಧಿಕಾರಿಗಳು ಮತ್ತು ಈಶ್ವರಪ್ಪನವರ ಅಪಾರ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳು ಪ್ರಮುಖರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Vishwaprasanna Swamiji of Udupi Pejawara Muttಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರುಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

Next Post

A stellar performance by Ganashree sisters

kalpa News

kalpa News

Next Post
A stellar performance by Ganashree sisters

A stellar performance by Ganashree sisters

Comments 1

  1. Pingback: ವಿಶ್ವ ಪರಿಸರ ದಿನ: ಸೋಲಾರ್ ಇಂಡಕ್ಷನ್ ಸ್ಟೌವ್'ಗೆ ಶಾಸಕ ಶ್ರೀವತ್ಸ ಚಾಲನೆ  » kalpa.news

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL