ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಗುರುತಿಸಲು MCCTNS ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಲಾಗಿದ್ದು, ನೂತನ ಅಪ್ಲಿಕೇಷನ್ ಅನ್ನು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೊಬೈಲ್ ಫೋನ್‌ಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ.
ಈ ರಾತ್ರಿ ಗಸ್ತು ಕರ್ತವ್ಯವನ್ನು ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಫಿಂಗರ್ ಪ್ರಿಂಟ್ ಸ್ಕ್ಯಾನರ್ ನೀಡಲಾಗಿದ್ದು, ಅವರುಗಳು ಫಿಂಗರ್ ಸ್ಕ್ಯಾನರ್ ಮುಖಾಂತರ ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುವವರ ಬೆರಳನ್ನು ಸ್ಕ್ಯಾನ್ ಮಾಡಿ ಅಪರಾಧಿಕ ಹಿನ್ನೆಲೆ ಕಂಡು ಬಂದಲ್ಲಿ ಅವರನ್ನು ಠಾಣೆಗೆ ಕರೆ ತಂದು ಸಂಪೂರ್ಣ ಹಿನ್ನೆಲೆಯನ್ನು ಪರಿಶೀಲಿಸಿ ಕಾನೂನು ಕ್ರಮ ಜರುಗಿಸಲಾಗುವುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















