ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು #Gandhi Jayanthi and Lalbahadur Shastri Jayanthi ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಹಾತ್ಮ ಗಾಂಧಿಯವರ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಆಡಳಿತಾಧಿಕಾರಿ ಪ್ರೊ. ರಾಮಚಂದ್ರ ಬಾಳಿಗಾ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜೀವನ ಮೌಲ್ಯ ಹಾಗೂ ದೇಶ ಪ್ರೇಮದ ಕುರಿತು NSS ಕಾರ್ಯಕ್ರಮಾಧಿಕಾರಿಗಳಾದ ಮೋಹನ್ ಕುಮಾರ್ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ ಸಂಧ್ಯಾಕವೇರಿ ಅವರು “ಕರ್ನಾಟಕದಲ್ಲಿ ಗಾಂಧಿ” ಎಂಬ ಪುಸ್ತಕದಿಂದ ಗಾಂಧೀಜಿಯವರು ಭದ್ರಾವತಿಗೆ ಭೇಟಿ ನೀಡಿದ ಸಂಧರ್ಭದ ಕುರಿತ ಲೇಖನವನ್ನು ಓದಿ ಹೇಳಿದರು.
ವಿಧ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿಗಳು ತನಮಯಿ ಹಾಗೂ ತಂಡದ ನೇತೃತ್ವದಲ್ಲಿ ಸುಶ್ರಾವ್ಯವಾಗಿ ಭಜನೆಗಳನ್ನು ಹಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post