ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಅಂಗಾಂಗ ದಾನದ ಬಗ್ಗೆ ಜನರು ಹೊಂದಿರುವ ಮೂಢನಂಬಿಕೆಯನ್ನು ಹೋಗಲಾಡಿಸಿ ನಿರಂತರ ಜಾಗೃತಿ ಮೂಡಿಸುವ ಕೆಲಸವನ್ನು ವೈದ್ಯಕೀಯ ಕ್ಷೇತ್ರದಲ್ಲಿರುವವರು ಮಾಡಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಡಾ. ಆರ್.ಪಿ. ಪೈ ಕರೆ ನೀಡಿದರು.
ಕಾಲೇಜಿನಲ್ಲಿ ವಿಶ್ವ ಅಂಗಾಂಗ ದಿನಾಚರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅತ್ಯಂತ ಮುಖ್ಯವಾಗಿ ವೈದ್ಯಕೀಯ ಕ್ಷೇತ್ರದಲ್ಲಿರುವವರು ಅಂಗಾಂಗ ದಾನ ಹಾಗೂ ಅದರ ಮಹತ್ವದ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಇದರ ಬಗ್ಗೆ ಬಹಳಷ್ಟು ಜನರಲ್ಲಿ ಮೂಢನಂಬಿಕೆ ಇದ್ದು, ಇದನ್ನು ಹೋಗಲಾಡಿಸುವ ಜಾಗೃತಿ ಅಭಿಯಾನವನ್ನು ನಿರಂತರವಾಗಿ ನಡೆಸಬೇಕು. ಇದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ. ಇದು ಒಂದು ನಿರಂತರ ಅಭಿಯಾನವಾಗಬೇಕು. ಅಲ್ಲದೆ ಸಮಾಜದಲ್ಲಿ ಗಣ್ಯ ವ್ಯಕ್ತಿಗಳು ಎನಿಸಿಕೊಂಡವರು ಅಂಗಾಂಗ ದಾನಕ್ಕೆ ಸಹಿ ಹಾಕುವ ಮೂಲಕ ಪ್ರೇರಣೆಯಾಗಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಅಂಗಾಂಗ ದಾನ ಎನ್ನುವುದು ಕಡಿಮೆಯಾಗಿದೆ. ಹೀಗಾಗಿ ಅಂಗಾಂಗದಾನಕ್ಕೆ ಸಂಬಂಧಿಸಿದಂತೆ ಸಂಸ್ಥೆಗಳು ಹಾಗೂ ವೆಬ್‌ಸೈಟ್‌ಗಳು ಸಾಕಷ್ಟು ಪ್ರಚಾರ ಮಾಡಬೇಕು. ಅಂಗಾಂಗ ದಾನ ಹಾಗೂ ಕಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆರೋಗ್ಯಕರ ವಾತಾವರಣ ಸೃಷ್ಟಿಸಿ ಪ್ರೇರಣೆದಾಯಕವಾಗಬೇಕು ಎಂದರು.
ಕಾಲೇಜಿನ ವೈದ್ಯಕೀಯ ನಿರ್ದೆಶಕ ಡಾ. ಎಸ್. ನಾಗೇಂದ್ರ ಮಾತನಾಡಿ, ಮನುಷ್ಯ ತನ್ನ ಜೀವನದಲ್ಲಿ ಮಾಡಬಹುದಾದ ಒಂದು ಪುಣ್ಯದ ಕಾರ್ಯಗಳಲ್ಲಿ ರಕ್ತದಾನವೂ ಒಂದು. ಎಷ್ಟೋ ಅಪಘಾತವಾಗಿ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿ ಇರುತ್ತದೆ. ಬಹಳಷ್ಟು ಸನ್ನಿವೇಶಗಳಲ್ಲಿ ಅಗತ್ಯವಿರುವ ರಕ್ತವನ್ನು ಹೊಂದಿಸಲು ಕಷ್ಟಪಡಬೇಕಾದ ಸಂದರ್ಭಗಳೂ ಸಹ ಉದ್ಭವವಾಗಿರುತ್ತದೆ. ಹೀಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಅಗತ್ಯವಿರುವವರಿಗೆ ನೆರವಾಗಬೇಕು. ವೈದ್ಯಕೀಯ ಸಿಬ್ಬಂದಿಗಳು ರಕ್ತದಾನದ ಬಗ್ಗೆ ಜನಸಾಮಾನ್ಯರಿಗೆ ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.
ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿನಯಾ ಶ್ರೀನಿವಾಸ್, ರೋಗ ಲಕ್ಷಣ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನೀತ್ ಆನಂದ್, ಪ್ರಾಂಶುಪಾಲರಾದ ಡಾ. ಎಸ್.ಎಮ್. ಕಟ್ಟಿ, ಉಪಪ್ರಾಂಶುಪಾಲ ಡಾ. ಸಿದ್ದಪ್ಪ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post