ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿ ಜೀವನವೆಂದರೆ ಆಟ, ಪಾಠ, ಮನೋರಂಜನೆ ನೆನಪಾಗುತ್ತದೆ. ವಿದ್ಯಾರ್ಥಿಗಳೆಂದರೆ ಕೇವಲ ಓದುತ್ತಾ ಇರುವವರು ಮಾತ್ರವಲ್ಲ ದೈಹಿಕವಾಗಿಯೂ ಕೂಡ ದಂಡನೆ ಇರಬೇಕು ಎಂದು ಅಂತರಾಷ್ಟ್ರೀಯ ಪವರ್ ಲಿಫ್ಟರ್ ತರಬೇತುದಾರರು ಮತ್ತು ತೀರ್ಪುಗಾರಕೆ. ಪ್ರಕಾಶ್ ಕಾರಂತ ಅವರು ಕ್ರೀಡೆಯ ಮಹತ್ವವನ್ನು ತಿಳಿಸಿಕೊಟ್ಟರು.
ಪಿಇಎಸ್ ಸಮೂಹ ಸಂಸ್ಥೆಯ ಆವರಣದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸಿದರೆ ಓದಲು ಏಕಾಗ್ರತೆ ಬರುವುದಿಲ್ಲ ಎನ್ನುವುದು ತಪ್ಪು. ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ. ಗಟ್ಟಿಯಾದ ಶರೀರವಿದ್ದರೆ ಆರೋಗ್ಯವಂತರಾಗಿರುತ್ತಾರೆ. ಕ್ರೀಡೆಗಳನ್ನು ಆಡುವುದರಿಂದ ದೃಢ ಶರೀರದ ಜೊತೆಗೆ ಆರೋಗ್ಯವಂತ ಮನಸ್ಸು ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಪಿಇಎಸ್ ಸಮೂಹ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಜ್ ಮಾತನಾಡಿ, ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಶಿಕ್ಷಣ ದೈಹಿಕ ಶಿಕ್ಷಣಕ್ಕೆ ಸ್ಪೂರ್ತಿಯಾದರೆ, ದೈಹಿಕ ಶಿಕ್ಷಣ ಬೌದ್ಧಿಕ ವಿಷಯಗಳಿಗೆ ಪೂರಕ ಅಂಶಗಳನ್ನು ನೀಡಿ ಕಲಿಕಾ ಪ್ರಗತಿಗೆ ಪೂರಕ ವ್ಯವಸ್ಥೆಯನ್ನು ಮಾಡಿಕೊಡುತ್ತದೆ ಎಂದು ತಿಳಿ ಹೇಳುವುದರ ಜೊತೆಗೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಪಿಇಎಸ್ ಸಮೂಹ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಡಾ|. ಸೆಂಥಿಲ್ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಪ್ರಾಥಮಿಕ ವಿಭಾಗದ ಸಂಯೋಜಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ಕವಾಯತು ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು.
5ನೇ ತರಗತಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮಾನ್ಯ ಸ್ವಾಗತಿಸಿ, ಆರತಿ ಪಟೇಲ್ ವಂದಿಸಿ, ಇಬ್ಬನಿ ಮತ್ತು ಸಿರಿ ಟಿ. ಜಿ. ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕರುಗಳಾದ ನಾಗರಾಜ, ಕಿರಣ್ ಮತ್ತು ಸಂಜಯ್ ಇವರುಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿ ಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post