No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಮೈಲಿಗಲ್ಲು | `ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ ಆರಂಭ

ಡಾ.ಲತಾ ಆರ್. ತೆಲಂಗ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2025
in ಶಿವಮೊಗ್ಗ
0
ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಮೈಲಿಗಲ್ಲು | `ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಸುಬ್ಬಯ್ಯ ಸಂಶೋಧನಾ ಸಂಸ್ಥೆ `ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ (Subbaiah Translational Research Initiative)‘ ಎಂಬ ಅತ್ಯಾಧುನಿಕ ಆರೋಗ್ಯ ರಕ್ಷಣೆಯ ಸಂಶೋಧನೆಯ ಹೆಜ್ಜೆಯಿಟ್ಟಿದ್ದು, ಈ ಮೂಲಕ ಮಹತ್ವದ ಮೈಲಿಗಲ್ಲನ್ನು ರೂಪಿಸಿದೆ.
ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಮಹತ್ವದ ಸಂಶೋಧನಾತ್ಮಕ ಪೂರಕ ಸಭೆಯಲ್ಲಿ ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ ಆರಂಭಗೊಂಡಿದೆ. ಇದರ ಅಡಿಯ ಗುರಿಯಲ್ಲಿ ಪ್ರಯೋಗಾಲಯ ಸಂಶೋಧನೆಗಳು ಹಾಗೂ ಕ್ಲಿನಿಕಲ್ ಅಭ್ಯಾಸಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ಒಟ್ಟಾಗಿ ಸಾಗುವ ಚಿಂತನೆಯಿದೆ. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಈ ಕ್ರಮ ಶಿವಮೊಗ್ಗ ಮಾತ್ರವಲ್ಲ ರಾಜ್ಯದ ಆರೋಗ್ಯ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿ, ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್’ಆರ್’ಐ ಅಧ್ಯಕ್ಷರಾದ ಡಾ.ಲತಾ ಆರ್. ತೆಲಂಗ್, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ತಡಿಕೆಲ ಸುಬ್ಬಯ್ಯ ಟ್ರಸ್ಟ್ ನೀಡಿದ ಎರಡು ದಶಕಗಳ ಕೊಡುಗೆಗಳ ಕುರಿತಾಗಿ ತಿಳಿಸಿದರು.

ಸುಮಾರು ಎರಡೂವರೆ ದಶಕಗಳಲ್ಲಿ ತಡಿಕೆಲ ಸುಬ್ಬಯ್ಯ ಟ್ರಸ್ಟ್ ವತಿಯಿಂದ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಸಾಲು ಸಾಲು ಕೊಡುಗೆಗಳ ಕುರಿತಾಗಿ ವಿವರವಾದ ಮಾಹಿತಿ ತಿಳಿಸಿದರು.
ಎಸ್’ಆರ್’ಐಯನ್ನು ಪ್ರಭಾವಶಾಲಿ ಸಂಶೋಧನೆ ಮತ್ತು ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿರುವುದಾಗಿ ಅವರು ತಿಳಿಸಿದರು.

ವೈದ್ಯಕೀಯ ನಿರ್ದೇಶಕ ಡಾ. ಎಸ್. ನಾಗೇಂದ್ರ ಮಾತನಾಡಿ, ಕಲಿಕೆ ಮೂಲಭೂತ ಅಡಿಪಾಯವಾಗಿದ್ದು, ಇದಕ್ಕೆ ಪೂರಕವಾಗಿ ಸಂಶೋಧನೆ ಮೂಲಭೂತವಾದ ಅಂಶವಾಗಿದೆ. ಇದಕ್ಕೆ ಅನ್ವಯವಾಗುವಂತೆ ಸಾಗುವುದು ಈ ರಿಸರ್ಚ್ ಇನ್ಷಿಯೇಟಿವ್ ಗುರಿಯಾಗಿದೆ ಎಂದರು.
ಆರೋಗ್ಯ ಸೇವೆಯಲ್ಲಿನ ಅತ್ಯುತ್ತಮ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನೀಡುವಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ಸಾಮಾನ್ಯವಾಗಿ ತಂತ್ರಜ್ಞಾನ ಆಧಾರಿತವಾದ ಚಿಕಿತ್ಸೆ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಫಲಿತಾಂಶ ನೀಡುತ್ತದೆ. ಅಲ್ಲದೇ, ನಿಖರ ಪ್ರಯೋಗಾಲಯದ ವರದಿ ಹಾಗೂ ಆರೋಗ್ಯ ಪರೀಕ್ಷಾ ಅಂಕಿಅಂಶಗಳು ಆಧಾರಿತ ಪರಿಹಾರಗಳು ನಿಖರತೆಯನ್ನು ಹೊಂದಿರುತ್ತದೆ. ಹೀಗಾಗಿ, ಆರೋಗ್ಯ ಕ್ಷೇತ್ರದಲ್ಲಿನ ಅತ್ಯಾಧುನಿಕ ನಿರಂತರ ಸಂಶೋಧನೆಗಳು ಮಹತ್ವ ಪಡೆದಿವೆ ಎಂದರು.

ಬೆಂಗಳೂರಿನ ಎನ್’ಸಿಬಿಎಸ್ ನಿರ್ದೇಶಕರಾದ ಪ್ರೊ.ಎಲ್.ಎಸ್. ಶಶಿಧರ ಮಾತನಾಡಿ, ಇಂತಹ ಅತ್ಯಾಧುನಿಕ ಸಂಶೋಧನೆಗಳಿಗೆ ತನ್ನನ್ನು ತಾನು ತೆರೆದುಕೊಂಡಿರುವ ರಾಜ್ಯದ ಮೊದಲ ಸಂಸ್ಥೆ ಸುಬ್ಬಯ್ಯ ವೈದ್ಯಕೀಯ ಕಾಲೇಜು ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಶಂಸಿಸಿದರು.

ಪ್ರತಿ ರೋಗಿಗೂ ಉತ್ತಮ ಚಿಕಿತ್ಸೆ ನೀಡುವುದಕ್ಕೆ ಪೂರಕವಾಗಿ ದೃಢವಾದ ಸಂಶೋಧನಾ ಪರಿಸರ ಜೈವಿಕ ವ್ಯವಸ್ಥೆ ಹಾಗೂ ಅತ್ಯಾಧುನಿಕ ರೋಗ ನಿರ್ಣಯ ತಂತ್ರಜ್ಞಾನಗಳು ಇಂದಿನ ಕಾಲದಲ್ಲಿ ಅವಶ್ಯತವಾಗಿವೆ ಎಂದರು.

ಆರೋಗ್ಯ ರಕ್ಷಣೆ ಎಂದಿಗೂ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಆಗುವ ಕಾರ್ಯವಲ್ಲ. ಇದು ವೈದ್ಯರಿಂದ ಮೊದಲ್ಗೊಂಡು ಸಮುದಾಯ ಆರೋಗ್ಯ ಕಾರ್ಯಕರ್ತರವರೆಗೆ ಎಲ್ಲರೂ ಶ್ರಮಿಸಿ, ಮಾಡಬೇಕಾದ ಪ್ರಯೋಗಾತ್ಮಕ ಕಾರ್ಯವಾಗಿದೆ ಎಂದರು.
ಕುವೆಂಪು ವಿವಿ ಕುಲಪತಿಗಳಾದ ಡಾ.ಶರತ್ ಅನಂತಮೂರ್ತಿ, ಬೆಂಗಳೂರು ಟಾಟಾ ಇನ್ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಹಾಗೂ ಸೊಸೈಟಿ ನಿರ್ದೇಶಕರಾದ ಪ್ರೊ. ರಾಕೇಶ್ ಮಿಶ್ರಾ, ಹೈದರಾಬಾದ್ ಟಿಐಎಫ್’ಆರ್ ನಿರ್ದೇಶಕರಾದ ಪ್ರೊ. ಉಲ್ಲಾಸ್ ಕೊಲ್ತೂರ್ ಸೀತಾರಾಮ್, ಹೈದರಾಬಾದ್’ನ ಸೆಂಟರ್ ಫಾರ್ ಸೆಲ್ಯುಲಾರ್ ಹಿರಿಯ ವಿಜ್ಞಾನ ಪ್ರೊ. ಕುಮಾರಸ್ವಾಮಿ ತಂಗರಾಜ್, ದೆಹಲಿ ವಿವಿ ಸಹಾಯಕ ಪ್ರಾಧ್ಯಾಪಕಿ ಡಾ. ಪಲ್ಲವಿ ಕ್ಷೇತ್ರಪಾಲ್, ನೆದರ್’ಲ್ಯಾಂಡ್ ಕೆಎನ್’ಸಿವಿ ಟಿಡಿ ಫೌಂಡೇಶನ್ ಟೀಂ ಲೀಡರ್ ಡಾ.ವಿಜಯಶ್ರೀ ಯಲ್ಲಪ್ಪ, ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್, ಮೆಡಿಕಲ್ ಕಾಲೇಜಿನ ಡೀನ್ ಡಾ.ವಿನಾಯಕ, ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ ಸೇರಿದಂತೆ ಹಲವರು ಇದ್ದರು.

ಇನ್ನು, ಎಸ್’ಟಿಆರ್’ಐ ಮೂಲಕ, ಸುಬ್ಬಯ್ಯ ಸಂಶೋಧನಾ ಸಂಸ್ಥೆಯು ಒಡಂಬಡಿಕೆಗಳ ಮೂಲಕ ಅತ್ಯಾಧುನಿಕ ಸಂಶೋಧನೆಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಅಂತಿಮವಾಗಿ ಸಂಶೋಧನಾ ಫಲಿತಾಂಶಗಳನ್ನು ರೋಗಿಗಳ ಉತ್ತಮ ಆರೋಗ್ಯಕ್ಕಾಗಿ ಆರೈಕೆ ಹಾಗೂ ಗುಣಮಟ್ಟದ ಆರೋಗ್ಯ ಸಂಬಂಧಿತ ಚಿಕಿತ್ಸೆಗಳನ್ನು ನೀಡುವುದಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಎಸ್’ಟಿಆರ್’ಐ ಗುರಿಗಳೇನು?

  • ಕ್ಲಿನಿಕಲ್ ಹಾಗೂ ಸಾಮಾಜಿಕವಾಗಿ ಆಗಬಹುದಾದ ಪರಿಣಾಮಗಳ ಆಧಾರದಲ್ಲಿ ಸಂಶೋಧನೆ ಕೈಗೊಳ್ಳುವುದು
  • ಶಿಸ್ತುಬದ್ದವಾಗಿ ಹಾಗೂ ಗುಣಮಟ್ಟದ ಆದ್ಯತೆಯೊಂದಿಗೆ ಕ್ರಮಬದ್ದವಾಗಿ ಸಂಶೋಧನೆಗಳನ್ನು ಕೈಗೊಳ್ಳುವುದು
  • ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಮಾಹಿತಿ ವಿನಿಮಯ ಮಾಡಿಕೊಳ್ಳಲು ವ್ಯವಸ್ಥೆ ರೂಪಿಸಿವುದು
  • ಶೈಕ್ಷಣಿಕ ಸಂಶೋಧನೆಯನ್ನು ಬಲಗೊಳಿಸಿ, ಅತ್ಯಾಧುನಿಕ ತಂತ್ರಜ್ಞಾನ ವಿನಿಮಯಕ್ಕಾಗಿ ಒಡಂಬಡಿಕೆ ಮಾಡಿಕೊಳ್ಳುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಕಳ | ಕ್ರೈಸ್ಟ್’ಕಿಂಗ್ ಕಾಲೇಜಿನಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

Next Post

ಗಮನಿಸಿ | ಶಿವಮೊಗ್ಗದ ಈ ರಸ್ತೆ ಇನ್ಮುಂದೆ ಒವ್ ವೇ | ಈ ರೋಡ್’ನಲ್ಲಿ ನೋ ಪಾರ್ಕಿಂಗ್ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ | ಶಿವಮೊಗ್ಗದ ಈ ರಸ್ತೆ ಇನ್ಮುಂದೆ ಒವ್ ವೇ | ಈ ರೋಡ್’ನಲ್ಲಿ ನೋ ಪಾರ್ಕಿಂಗ್ | ಇಲ್ಲಿದೆ ಡೀಟೇಲ್ಸ್

ಗಮನಿಸಿ | ಶಿವಮೊಗ್ಗದ ಈ ರಸ್ತೆ ಇನ್ಮುಂದೆ ಒವ್ ವೇ | ಈ ರೋಡ್'ನಲ್ಲಿ ನೋ ಪಾರ್ಕಿಂಗ್ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
ಮನೆ ಕಳ್ಳತನ ಪ್ರಕರಣ | ಓರ್ವನ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಮನೆ ಕಳ್ಳತನ ಪ್ರಕರಣ | ಓರ್ವನ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

June 18, 2026
Indian Railway Special Trains

Mysuru – Madar Junction Express Special Train Services Further Extended

June 18, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL