ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಅನವಟ್ಟಿ ಸಮೀಪ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದು, ಇದೇ ಸಂದರ್ಭದಲ್ಲಿ ಅಲ್ಲಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರು ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಇಬ್ಬರು ಮಹಿಳಾ ಗಾಯಾಳುಗಳನ್ನು ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲು ವಾಹನ ವ್ಯವಸ್ಥೆ ಮಾಡಿಸಿದ ಸಚಿವರು, ಇವರ ಚಿಕಿತ್ಸೆಗೆ ಸ್ಥಳದಲ್ಲೇ ಆರ್ಥಿಕ ಸಹಾಯವನ್ನು ನೀಡಿ ಸ್ಪಂದಿಸಿದರು. ಸಚಿವ ಸಿ.ಸಿ.ಪಾಟೀಲರ ಈ ಕ್ರಮಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post