ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಲಾರಿ ಮುಷ್ಕರವನ್ನ ಹಿಂಪಡೆಯುವಂತೆ ಲಾರಿ ಮಾಲೀಕರ ಸಂಘಕ್ಕೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.
ಲಾರಿ ಮಾಲೀಕರು ತಮ್ಮ ಮುಷ್ಕರವನ್ನು ತಕ್ಷಣ ನಿಲ್ಲಿಸಬೇಕು. ಈಡೀ ದೇಶದಲ್ಲಿ ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದೆ. ದರ ಹೆಚ್ಚಾಗಿರುವ ಬಗ್ಗೆ ಕೇಂದ್ರ ಸರಕಾರ ಗಮನಿಸುತ್ತಿದೆ. ಆದರೆ ಪೆಟ್ರೋಲ್ ಡಿಸೇಲ್ ದರ ಕಡಿಮೆ ಮಾಡುವುದು ನಮ್ಮ ಕೈಯಲ್ಲಿಲ್ಲ ಎಂದು ಹೇಳಿದರು.
ಕೇಂದ್ರ ಸರಕಾರ ಸಾಧ್ಯವಾದಷ್ಟು ದರ ಕಡಿಮೆ ಮಾಡುತ್ತದೆ. ಮುಷ್ಕರ ಮಾಡುವುದರಿಂದ ಲಾರಿ ಮಾಲೀಕರಿಗೆ ಅಷ್ಟೇ ಅಲ್ಲ ಚಾಲಕರಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ತೊಂದರೆ ಆಗುತ್ತದೆ ಎಂದರು.
ಎಲ್ಲಾ ಕ್ಷೇತ್ರದ ಮೇಲೂ ಮುಷ್ಕರದಿಂದ ತೊಂದರೆ ಆಗಲಿದೆ. ಈ ಬಗ್ಗೆ ಕೇಂದ್ರ ಸರಕಾರ ಗಮನಿಸುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಇಂಧನ ದರವನ್ನು ನಿರ್ಧಾರ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಮುಷ್ಕರವೇ ಎಲ್ಲದಕ್ಕೂ ಪರಿಹಾರ ಅಲ್ಲ. ದಯವಿಟ್ಟು ಮುಷ್ಕರ ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post