ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಸಚಿವ ಕೆ. ಎಸ್. ಈಶ್ವರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಲ್ಯಾಣ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ಸಿಂಗ್ ರವರು ರಾಜ್ಯಪಾಲರಾಗಿಯೂ ಗುರುತರವಾದ ಸೇವೆಯನ್ನು ಸಲ್ಲಿಸಿದ್ದಾರೆ.
ಅಂತಹ ಹಿರಿಯ ಸಜ್ದನ ಮೇಧಾವಿ ರಾಜಕಾರಣಿಯನ್ನು ನಾವೆಲ್ಲ ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post