ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಐಎಂಎ ಮತ್ತು ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಪೀಡಿತ ರೋಗಿಗಳಿಗೆ ಮತ್ತು ಅವರ ಜೊತೆ ಆಗಮಿಸುವ ಬಂಧುಗಳಿಗೆ ವಸತಿ, ಊಟ ವ್ಯವಸ್ಥೆ ಮಾಡುವ ಸ್ಥಳವನ್ನು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವೀಕ್ಷಣೆ ಮಾಡಿ ಪರೀಶಿಲನೆ ನಡೆಸಿದರು.

ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಎಲ್ಲಾ ಅಧಿಕಾರಿಗಳು ಯುದ್ಧೋಪಾದಿ ಮಾದರಿಯಲ್ಲಿ ಕೆಲಸಗಳನ್ನು ಮಾಡಲು ಆದೇಶಿಲಾಯಿತು. ಯಾವ ಕೋವಿಡ್ ರೋಗಿಗೂ ತೊಂದರೆ ಆಗಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ವೈಶಾಲಿ, ಡಾ. ಶ್ರೀಧರ್, ಜಿಪಂ ಸದಸ್ಯ ಕೆ.ಈ. ಕಾಂತೇಶ್, ಡಿ.ಎಸ್. ಅರುಣ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















