ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ಆಶ್ರಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರದ 35 ವಾರ್ಡ್ ಗಳಿಗೆ ಔಷಧ ಸಿಂಪಡಿಸುವ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿ ಮನೆಗೂ ಆಯುರ್ವೇದಿಕ್ ಕಿಟ್ ವಿತರಿಸಲಾಗಿತ್ತು. ಇದರಿಂದ ಜನತೆಗೆ ತುಂಬಾ ಅನುಕೂಲವಾಗಿತ್ತು. ಅದರ ಮುಂದುವರೆದ ಭಾಗವಾಗಿ ಈ ಬಾರಿ ನಗರದ ಎಲ್ಲಾ ವಾರ್ಡ್‌ಗಳ ಪ್ರತಿ ಬೀದಿಗಳೀಗೂ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುವುದು ಎಂದರು.
ಸ್ಯಾನಿಟೈಸ್ ಕಾರ್ಯಕ್ಕಾಗಿ 6 ವಾಹನಗಳು ಸಿದ್ಧವಾಗಿದ್ದು, 2-3 ವಾರ್ಡ್‌ಗೆ ಒಂದರಂತೆ ಸ್ಯಾನಿಟೈಸರ್ ಸಿಂಪಡಿಸಲಾಗುವುದು. 3-4 ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದ್ದು, ಕೋವಿಡ್ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂಬವಿಶ್ವಾಸದೊಂದಿಗೆ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಸ್ವತಃ ಸಚಿವರು ಔಷದಿ ಸಿಂಪಡಿಸಿದರು. ಜೊತೆಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಕೊವಿಡ್ ರಕ್ಷಾ ಪಡೆಯ ಯುವನಾಯಕ ಕೆ.ಈ. ಕಾಂತೇಶ್ ಸಾಥ್ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post