No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತ್ವರಿತಗತಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 27, 2021
in ಶಿವಮೊಗ್ಗ
0
ತ್ವರಿತಗತಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಈಶ್ವರಪ್ಪ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಡಳಿಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಒಟ್ಟು 363 ಮನೆಗಳು ಈಗಾಗಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಅಂತಿಮ ಹಂತದಲ್ಲಿರುವ 414 ಮನೆಗಳನ್ನು ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಇನ್ನೂ ಆರಂಭಿಸದಿರುವ 217 ಮನೆಗಳ ನಿರ್ಮಾಣ ಕಾರ್ಯ ಮುಂದಿನ 8 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ನಿಗದಿತ ಅವಧಿಯ ಒಳಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸದಿದ್ದರೆ, ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಮಂಜೂರಾಗಿದ್ದ 1560 ಮನೆಗಳ ಪೈಕಿ 971 ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು,ಈಗಾಗಲೇ ಫಲಾನುಭವಿಗಳಿಂದ 6.58 ಕೋಟಿ ರೂ. ಸಂಗ್ರಹಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು 1.60ಲಕ್ಷ ರೂ, ಪ.ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು 31ಸಾವಿರ ರೂ. ವಂತಿಗೆ ಪಾವತಿಸಬೇಕಾಗಿದೆ. 4.75ಲಕ್ಷ ರೂ. ಸರ್ಕಾರ ಸಬ್ಸಿಡಿ ಒದಗಿಸಲಾಗುತ್ತಿದೆ.

ಕೆಲವು ಫಲಾನುಭವಿಗಳು ಪ್ರಾರಂಭಿಕ ವಂತಿಗೆಯನ್ನು ನೀಡಲು ವಿಳಂಬ ಮಾಡುತ್ತಿದ್ದು, ಈ ಮೊತ್ತವನ್ನು ತಕ್ಷಣ ಪಾವತಿಸಲು ಸೂಚಿಸಲಾಗಿದೆ. ಮಂಡಳಿ ವತಿಯಿಂದ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತಿಲ್ಲ. ಬ್ಯಾಂಕಿನಿಂದ ನೇರವಾಗಿ ಸಾಲ ಪಡೆಯಲು ನೆರವು ನೀಡಲಾಗುವುದು. ಈ ಕುರಿತು ಎಲ್ಲಾ ಬ್ಯಾಂಕ್‌ಗಳ ಸಭೆಯನ್ನು ಕರೆದು ಸೂಚನೆ ನೀಡಲು ಜಿಲ್ಲಾಧಿಕಾರಿ ಅವರಿಗೆ ತಿಳಿಸಲಾಗಿದೆ. ಫಲಾನುಭವಿಗಳೇ ನೇರವಾಗಿ ಮನೆ ನಿರ್ಮಿಸಲು ಮುಂದೆ ಬಂದರೆ ಅನುಮತಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.

ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರವನ್ನು ನೀಡಲು ಪ್ರಕ್ರಿಯೆ ನಡೆಯುತ್ತಿದ್ದು, 1783 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 53 ಘೋಷಿತ ಕೊಳಚೆ ಪ್ರದೇಶಗಳಿದ್ದು, ಸದರಿ ಕೊಳಚೆ ಪ್ರದೇಶಗಳ ವಿಸ್ತೀರ್ಣ 139 ಎಕರೆಯಿದೆ. ಖಾಸಗಿ ಮಾಲಿಕತ್ವದ ಕೊಳಚೆ ಪ್ರದೇಶಗಳನ್ನು ಘೋಷಿತ ಕೊಳಚೆ ಪ್ರದೇಶಗಳೆಂದು ಪರಿಗಣಿಸಲಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನರೇಗಾ ಮಾನವ ದಿನಗಳ ಗುರಿ ಹೆಚ್ಚಳ:
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಬೇಡಿಕೆಯನ್ನು ಮನ್ನಿಸಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.

ಕೇಂದ್ರ ಸರ್ಕಾರ ಯೋಜನೆಯಡಿ 661.24ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಇಲ್ಲಿಯವರೆಗೆ ಸಂಪೂರ್ಣವಾಗಿ ಯೋಜನೆಯಡಿ ಕೂಲಿ ಹಣವನ್ನು ಪಾವತಿಸಿದಂತಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಉಪವಿಭಾಗಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dhakshina Kannada NewsKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMinister EshwarappaNews in KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share197Tweet123Send
Previous Post

ಪ್ರವಾಸಿಗರು ಕಡ್ಡಾಯ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು : ಸಿಎಂ

Next Post

ಗಮನಿಸಿ! ಡಿ:29ರಂದು ವಡ್ಡಿನಕೊಪ್ಪ, ಹಸೂಡಿ, ಬಾಲರಾಜ್ ಅರಸ್ ರಸ್ತೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ:29ರಂದು ವಡ್ಡಿನಕೊಪ್ಪ, ಹಸೂಡಿ, ಬಾಲರಾಜ್ ಅರಸ್ ರಸ್ತೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL