ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ Minister Eshwarappa ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
Also read: ಏ.16ರಂದು ಗಾಯಕಿ ಸೂರ್ಯ ಗಾಯತ್ರಿ ಅವರಿಂದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ
ಈ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿದ್ದೇ ಆದರೆ ನನಗೆ ಶಿಕ್ಷೆಯಾಗಲಿ. ನನಗೆ ತಾಯಿ ಚೌಡೇಶ್ವರಿ ಮೇಲೆ ನಂಬಿಕೆ ಇದೆ. ತನಿಖೆ ನಡೆಯಲಿ. ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ. ಈ ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಆಗಬಾರದು ಎಂಬ ಉದ್ದೇಶದಿಂದ ರಾಜೀನಾಮೆ ನೀಡುತ್ತಿದ್ದೇನೆ. ನಾಳೆ ಬೆಂಗಳೂರಿಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post