ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ಸಲುವಾಗಿ ಅರ್ಜಿಯನ್ನು ಸಲ್ಲಿಸಿದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ. ರಮೇಶ್ ಶೆಟ್ಟಿ ಇವರು ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರ #Minister Madhu Bangarappa ಸಲಹೆ ಮೇರೆಗೆ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.
ಅವರು ಇಂದು ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಮೇಶ್ ಇವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರ ಸೂಚನೆ ಮೇರೆಗೆ ನಾನು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದೇನೆ. ಕಳೆದ ಬಾರಿ ಚುನಾವಣೆಯಲ್ಲಿ ಅಲ್ಪ ಮತದಿಂದ ಪರಾಭವಗೊಂಡಿದ್ದೆ ಹಾಗೂ ಸಾವಿರಾರು ಶಿಕ್ಷಕರುಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಕೆಲಸವನ್ನು ಮಾಡಿದ್ದೆ. ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತನಂತೆ ಕೆಲಸ ನಿರ್ವಹಿಸಿದ್ದರೂ ಸಹ ನನಗೆ ಟಿಕೆಟ್ ಕೈತಪ್ಪಿದ್ದರಿಂದ ಕೊನೆಯ ಹಂತದಲ್ಲಾದರೂ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಿಂದ ನಾಮಪತ್ರ ಸಲ್ಲಿಸಿದ್ದೆ. ವರಿಷ್ಠರ ಸೂಚನೆ ಮೇರೆಗೆ ಈಗ ನಾಮಪತ್ರ ಹಿಂದಕ್ಕೆ ಪಡೆದು ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದ ಡಾ.ಕೆ ಮಂಜುನಾಥ್ ಇವರನ್ನು ಗೆಲ್ಲಿಸಲು ಕ್ಷೇತ್ರಾದ್ಯಂತ ಸಂಚರಿಸುವುದಾಗಿ ರಮೇಶ್ ತಿಳಿಸಿದ್ದಾರೆ.
Also read: ಮಳೆ ಅವಾಂತರ | ಮದುವೆ ಛತ್ರಕ್ಕೆ ನುಗ್ಗಿದ ನೀರು | ಹಲವು ಬಡಾವಣೆ ಜಲಾವೃತ
ಇದೇ ಸಂದರ್ಭದಲ್ಲಿ ಪದವೀಧರ ಕ್ಷೇತ್ರದ ಇನ್ನೊಬ್ಬ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ರಂಗಸ್ವಾಮಿ ಕೂಡ ನಾಮಪತ್ರ ಹಿಂದಕ್ಕೆ ಪಡೆದರು. ನಾಮಪತ್ರ ಹಿಂಪಡೆಯುವ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ಮಾಜಿ ಅಧ್ಯಕ್ಷರಾದ ಶಾಂತವೀರ್ ನಾಯಕ್ ಜೊತೆಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post