ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಅಶ್ವಥ್ ನಾರಾಯಣ ಅವರು 2021ರ ಅ.5 ರಂದು ರಾತ್ರಿ 9ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಅ.6ರಂದು ಬೆ. 10ಕ್ಕೆ ನಗರದ ಬಿ.ಹೆಚ್.ರಸ್ತೆಯಲ್ಲಿನ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ “ಇಂದು ಭಾರತದಲ್ಲಿ ವಿಜ್ಞಾನ-ತಂತ್ರಜ್ಞಾನ” ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.12.00ಕ್ಕೆ ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ. 2.00ಕ್ಕೆ ಶಿವಮೊಗ್ಗ ತಾಲೂಕಿನ ಬಿ.ಬೀರನಹಳ್ಳಿಯಲ್ಲಿ ನಡೆಯುವ ಡೇ- ಎನ್.ಆರ್.ಎಲ್.ಎಂ.ನ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಸಮುದಾಯ ಭಂಡವಾಳ ನಿಧಿ ಬಳಸಿ ಕೈಗೊಂಡಿರುವ ಆರ್ಥಿಕ ಚಟುವಟಿಕೆಗಳ ಪರಿಶೀಲನೆ ಹಾಗೂ ಒಕ್ಕೂಟದ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ. 3.15ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post