ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದು, ರಾತ್ರಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೇ ಬೇಜವಾಬ್ದಾರಿ ತೋರಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕರಿಗೆ ದೂರು ನೀಡಲಾಗಿದೆ.
ಈ ಕುರಿತಂತೆ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತ ನವೀನ್ ತಲಾರಿ ಅವರು ಸಿಮ್ಸ್ ನಿರ್ದೇಶಕ, ಡೀನ್ ಡಾ.ಓ.ಎಸ್. ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದು, ರಾತ್ರಿ ಹತ್ತು ಮೂವತ್ತಕ್ಕೆ ರೋಗಿಗಳನ್ನು ಸರಿಯಾಗಿ ಚಿಕಿತ್ಸೆ ನೀಡದೆ ಬೇಜಾಬ್ದಾರಿ ತೋರಿದ್ದಾರೆ. ಪುರುಷ ವಿದ್ಯಾರ್ಥಿ ತನ್ನ ಕಾಲನ್ನು ಟೇಬಲ್ ಮೇಲೆ ಇಟ್ಟು ಕುಳಿತು, ರೋಗಿಗಳ ಬಳಿ ತುಂಬಾ ಅಸಭ್ಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಪುರುಷ ವಿದ್ಯಾರ್ಥಿಯ ಜೊತೆ ಮಹಿಳಾ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಾರ್ವಜನಿಕರು ಇವರುಗಳ ವರ್ತನೆಯನ್ನು ಪ್ರಶ್ನೆ ಮಾಡಿದ್ದಕ್ಕೆ ನಮಗೆ ರಜೆ ಕೊಡುವುದಿಲ್ಲ, ವಿಶ್ರಾಂತಿ ಪಡೆಯಲು ಬಿಡುವುದಿಲ್ಲ, ನಾವು ಹೀಗೆ ಮಾಡುವುದು ಎಂದು ಬೇಜವಾಬ್ದಾರಿಯ ಉತ್ತರ ನೀಡಿದ್ದಾರೆ ಎಂದು ದೂರಿದ್ದಾರೆ.
ಈ ಬಗ್ಗೆ ಮಾತನಾಡಿರುವ ನವೀನ್ ತಲಾರಿ, ಲಕ್ಷಾಂತರ ಜನಗಳಿಗೆ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಮೆಗ್ಗಾನ್ ಆಸ್ಪತ್ರೆ ಸಾಕಷ್ಟು ಸುಧಾರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post