ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಇಂದು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಮನವಿ ಸಲ್ಲಿಸಲಾಯಿತು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಜನ ಕೊರೋನಾ ವ್ಯಾಕ್ಸಿನ್ ಬಗ್ಗೆ ಭಯಭೀತರಾಗಿ ಲಸಿಕೆ ಹಾಕಿಸಿಕೊಳ್ಳಲು ಭಯಪಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅರಿವು ಮೂಡಿಸಿದ ನಂತರ ಲಸಿಕೆ ಹಾಕಿಸಿಕೊಳ್ಳಲು ಬರುತ್ತಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಅಲ್ಪಸಂಖ್ಯಾತರು ಕಡಿಮೆ ಜನ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಮೂರು ದಿನಗಳಿಂದ ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಕೋವಿಡ್ ವ್ಯಾಕ್ಸಿನ್ ಹಾಕಿಸಿದರೆ 2ವರ್ಷ ದಲ್ಲಿ ಸಾಯುತ್ತಾರೆ. ಅಲ್ಲದೆ ಲಸಿಕೆ ಹಾಕಿಸಿಕೊಂಡರೆ ಅಡ್ಡ ಪರಿಣಾಮ ಬೀರುತ್ತದೆ ಎಂದು ಫ್ರೆಂಚ್ ನೊಬೆಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಹೇಳಿರುವುದಾಗಿ ನಕಲಿ ಸುದ್ದಿಗಳು ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿವೆ ಎಂದು ಮನವಿಯಲ್ಲಿ ದೂರಲಾಗಿದೆ.
ಇಂತಹ ನಕಲಿ ಸುದ್ದಿಗಳಿಂದ ಲಸಿಕೆ ಹಾಕಿಸಿಕೊಳ್ಳಲು ಜನ ಮತ್ತೆ ಭಯಪಡುವಂತಾಗಿದೆ. ಹಾಗಾಗಿ ಸಂಬಂಧಿಸಿದ ಟಿವಿ 9 ಹಿಂದಿ ವಾಹಿನಿ ಮತ್ತು ಸಾಮಾಜಿಕ ಜಾಲತಾಣಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಮೊಹಮ್ಮದ್ ಶಫೀವುಲ್ಲಾ ಜಿಲ್ಲಾ ಉಪಾಧ್ಯಕ್ಷರಾದ ಜಮೀರ್ ಬೋರ್ಡ್ ನಾಮ ನಿರ್ದೇಶಕರು ಫಕ್ರುದ್ದೀನ್ ಸಿದ್ಧಿಸಿ ತನ್ವೀರ್ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post