ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿ ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಕಲಾಪದಿಂದ ಅಮಾನತು ಮಾಡಲಾಗಿದೆ.
ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ಹುದ್ದೆಗೆ ಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ. ಖಾದರ್ ಆದೇಶಿಸಿದ್ದಾರೆ.
Also Read>> ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ
ಯಾರೆಲ್ಲಾ ಅಮಾನತು?
ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್.ಆರ್. ವಿಶ್ವನಾಥ್ ಅವರುಗಳನ್ನು ಅಮಾನತು ಮಾಡಲಾಗಿದೆ.

Also Read>> ಸುನೀತಾ ವಿಲಿಯಮ್ಸ್ ಮರಳಿ ಭೂಮಿಗೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ
ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು.

ಇದರಿಂದ ಕೆರಳಿದ ಬಿಜೆಪಿ ಶಾಸಕರು ತೀವ್ಯ ವಿರೋಧ ವ್ಯಕ್ತಪಡಿಸಿ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, `ಹನಿಟ್ರಾಪ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post