ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಳೆಯಿಂದಾಗಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಎದುರಾಗುತ್ತಿರುವ ತಾತ್ಕಾಲಿಕ ಆಡಚಣೆಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಚನ್ನಬಸಪ್ಪ #MLA Channabasappa ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಬೆಳಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡರವರೊಂದಿಗೆ ಶಾಸಕ ಚನ್ನಬಸಪ್ಪ ಅವರು ಮಿಳಗಟ್ಟ ಹಾಗೂ ಅಣ್ಣನಗರದ ಪ್ರಮುಖ ರಸ್ತೆಗಳ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು.
ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರ ಸಮಸ್ಯೆಗಳನ್ನು ಆಲಿಸಿ, ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸಂಬಂಧಿತ ಅಧಿಕಾರಿಗಳು, ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post