No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ: ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2023
in ಶಿವಮೊಗ್ಗ
0
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ: ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಖಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಇಂದು ಪಾಲಿಕೆ ಮೇಯರ್ ಹಾಗೂ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ನಿರ್ಮಾಣಕ್ಕೆ ವಿಶೇಷ ಆಸಕ್ತಿ ವಹಿಸಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಿದ್ದರು. ಆದರೆ ಈಗ ಆ ನಿಲ್ದಾಣದಲ್ಲಿ ಸಂಜೆಯಾದರೆ ಕುಡುಕರ ಕಾಟ ಮಿತಿ ಮೀರಿದ್ದು, ಬಹಿರಂಗವಾಗಿ ವೇಶ್ಯಾವಾಟಿಕೆ ನಡೆಯುತ್ತಿರುವುದರಿಂದ ಬಸ್ ನಿಲ್ದಾಣಕ್ಕೆ ಬರುವ ಮರ್ಯಾದಸ್ಥ ಹೆಣ್ಣು ಮಕ್ಕಳಿಗೆ ಮುಜುಗರವಾಗುತ್ತಿದ್ದು, ಬಸ್ ನಿಲ್ದಾಣದ ಒಳಗೆಯೇ ಮನಸ್ಸಿಗೆ ಬಂದಂತೆ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು, 10ಕ್ಕೂ ಹೆಚ್ಚು ತಿಂಡಿ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.
ಸ್ವಚ್ಛತೆ ಎಂಬುದು ಇಲ್ಲಿ ಮರೀಚಿಕೆಯಾಗಿದ್ದು, ನಿಲ್ದಾಣದ ಒಳಗಿರುವ ಅಂಗಡಿಗಳು ಐದು ಅಡಿಗೂ ಹೆಚ್ಚು ಸ್ಥಳ ಅತಿಕ್ರಮಣ ಮಾಡಿ ತಮ್ಮ ವಹಿವಾಟು ಮಾಡುತ್ತಿದ್ದಾರೆ. ಸರಿಯಾದ ವಿದ್ಯುತ್ ವ್ಯವಸ್ಥೆ ಇಲ್ಲ. ಕುಡಿಯುವ ನೀರಂತೂ ಇಲ್ಲವೇ ಇಲ್ಲ. ನೂರಾರು ಬಸ್‌ಗಳು ಓಡಾಡುವ ಸಾವಿರಾರು ಪ್ರಯಾಣಿಕರು ಆಗಮಿಸುವ ಈ ಬಸ್ ನಿಲ್ದಾಣದಲ್ಲಿ ಒಂದೇ ಒಂದು ಕ್ಯಾಂಟೀನ್ ಇಲ್ಲ. ಶೌಚಾಲಯಕ್ಕೆ ಐದು ರೂ. ನಿಗದಿ ಮಾಡಿದ್ದರೂ ಹತ್ತು ರೂ.ಗಳನ್ನು ಬಲವಂತವಾಗಿ ಕಿತ್ತುಕೊಳ್ಳುತ್ತಾರೆ. ಮೂತ್ರ ವಿಸರ್ಜನೆಗೂ 5ರೂ. ಪಡೆಯುತ್ತಾರೆ ಎಂಬುದು ಪ್ರಯಾಣಿಕರ ಆರೋಪ. ಕೆಲ ಪ್ರಯಾಣಿಕರು ಬಸ್ ನಿಲ್ದಾಣದ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಗಬ್ಬು ನಾತ ಬೀರುತ್ತಿದೆ. ಬಸ್ ನಿಲ್ದಾಣದ ಒಳಗಿರುವ ಲಾಡ್ಜ್‌ನಲ್ಲಿ ಬೆಡ್ ಒಂದಕ್ಕೆ 100ರೂ. ಶುಲ್ಕ ಇದ್ದರೆ ಅದನ್ನು ನಿರ್ವಹಿಸುವವರು 150ರೂ. ಪಡೆಯುತ್ತಾರೆ. ಬಿಸಿ ನೀರಿಗೆ 50ರೂ.ಗಳನ್ನು ಹೆಚ್ಚುವರಿಯಾಗಿ ಪಡೆಯುತ್ತಿದ್ದು, ಈ ಲಾಡ್ಜ್‌ನಲ್ಲಿ ಧೂಳು ಮತ್ತು ಕಸ ತುಂಬಿಕೊಂಡಿದೆ. ಇನ್ನೊಂದು ಬದಿಯಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ವಾಹನ ಪಾರ್ಕಿಂಗ್ ಸ್ಥಳ ಸದ್ಯಕ್ಕೆ ಲಭ್ಯವಿಲ್ಲದ ಕಾರಣ ಅಂಗಡಿಗಳ ಮಾಲೀಕರು ಮತ್ತು ಪ್ರಯಾಣಿಕರ ವಾಹನಗಳು ನಿಲ್ದಾಣದೊಳಗೆ ಎಲ್ಲಿ ಬೇಕಾದಲ್ಲಿ ಪಾರ್ಕ್ ಮಾಡುತ್ತಿದ್ದಾರೆ. ಬಸ್ ಚಾಲಕರು ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕೂಡ ಕೆಲವರು ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗಿಯುತ್ತಿದ್ದಾರೆ. ಕರೆಂಟ್ ನಿಯಂತ್ರಕ ಬಾಕ್ಸ್‌ಗಳು ನೇತಾಡುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ.

ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಜಾಗದಲ್ಲಿ ಸ್ವಚ್ಛತೆಯೇ ಇಲ್ಲ. ವಾಸ್ತವವಾಗಿ ಇದರ ನಿರ್ವಹಣೆಯ ಹೊಣೆ ಹೊರಬೇಕಾಗಿದ್ದ ಟೆಂಡರುದಾರ ಪ್ರತಿ ತಿಂಗಳು ಪಾಲಿಕೆಗೆ 97ಸಾವಿರ ಮಾತ್ರ ಬಾಡಿಗೆ ಕಟ್ಟುತ್ತಿದ್ದು, ಶೌಚಾಲಯ ಮತ್ತು ಸ್ಥಳೀಯ ಅಂಗಡಿ ಹಾಗೂ ಬಸ್ ಮಾಲೀಕರಿಂದ ಲಕ್ಷಾಂತರ ರೂ. ಕೀಳುತ್ತಿದ್ದಾನೆ ಎಂಬುದು ಸ್ಥಳೀಯರ ಆರೋಪ. ನಿರ್ವಹಣೆ ಎಂಬುದು ಕನಸಿನ ಮಾತಾಗಿದ್ದು, ಪಾಲಿಕೆಗೆ ಆದಾಯ ಕಡಿಮೆ ಇರುವುದರಿಂದ ನಿರ್ಲಕ್ಷ್ಯದ ಧೋರಣೆಯನ್ನು ಪಾಲಿಕೆ ಅಧಿಕಾರಿಗಳು ಅನುಸರಿಸುತ್ತಿದ್ದು, ಸಾರ್ವಜನಿಕರು ಇದರ ಫಲ ಅನುಭವಿಸಬೇಕಾಗಿದೆ.

http://kalpa.news/wp-content/uploads/2023/05/Jain-Public-School.mp4

ಈ ಎಲ್ಲಾ ಅಡಚಣೆಗಳನ್ನು ಗಮನಿಸಿದ ಶಾಸಕರು ಇಂದು ಖಾಸಗಿ ಬಸ್ ನಿಲ್ದಾಣದ ಪೂರ್ಣ ಪರಿಶೀಲನೆ ಮಾಡಿ ಎಲ್ಲಾ ಲೋಪದೋಷಗಳ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕೂಡಲೇ ಸರಿಪಡಿಸುವಂತೆ ಸೂಚನೆ ನೀಡಿದರಲ್ಲದೆ, ಸ್ವತಃ ಎಲ್ಲಾ ಅಂಗಡಿಗಳಿಗೂ ಎಚ್ಚರಿಕೆ ನೀಡಿ ಯಾವುದೇ ಕಾರಣಕ್ಕೂ ಅಂಗಡಿಯ ಹೊರಗೆ ವಸ್ತುಗಳನ್ನು ಇಡಬಾರದು ಮತ್ತು ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಮೇಯರ್ ಶಿಕುಮಾರ್, ಉಪಮೇಯರ್ ಲಕ್ಷ್ಮಿಶಂಕರ್ ನಾಯಕ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಆಯುಕ್ತ ಮಾಯಣ್ಣ ಗೌಡ, ಸ್ಥಳೀಯ ಕಾರ್ಪೊರೇಟರ್ ವಿಶ್ವನಾಥ್, ದೊಡ್ಡಪೇಠೆ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮೇ 27ರಂದು ಜೆಎನ್‌ಎನ್‌ಸಿಇ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Next Post

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜ ಒಡೆಯರ್ ಮೆಚ್ಚುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜ ಒಡೆಯರ್ ಮೆಚ್ಚುಗೆ

"ಶಿವಾಜಿ ಸುರತ್ಕಲ್ 2" ಚಿತ್ರಕ್ಕೆ ಮೈಸೂರು ಮಹಾರಾಜ ಒಡೆಯರ್ ಮೆಚ್ಚುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL