ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಕ್ಷೇತ್ರ ಪ್ರವಾಸದ ಅಂಗವಾಗಿ ನಗರದ ವಾರ್ಡ್ ನಂ.2ರ ಜ್ಯೋತಿನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಬಡಾವಣೆಯಲ್ಲಿ ಸಂಚರಿಸಿದ ಅವರು, ರಸ್ತೆಗಳ ದುಸ್ಥಿತಿ, ಒಳಚರಂಡಿ (ಯುಜಿಡಿ) ಸಮಸ್ಯೆಯಿಂದ ಜನರಿಗೆ ಆಗುತ್ತಿರುವ ತೊಂದರೆ ಹಾಗೂ ಉದ್ಯಾನವನ ಅಭಿವೃದ್ಧಿಯ ಅಗತ್ಯತೆಯನ್ನು ಸ್ಥಳದಲ್ಲೇ ಪರಿಶೀಲಿಸಿದರು.

Also read: ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಬಳಿಕ, ಉಪಸ್ಥಿತರಿದ್ದ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಮಸ್ಯೆಗಳ ಗಂಭೀರತೆಯನ್ನು ಮನವರಿಕೆ ಮಾಡಿ, ತಕ್ಷಣ ಕ್ರಮ ಕೈಗೊಂಡು ಕ್ರಿಯಾ ಯೋಜನೆ ರೂಪಿಸಿ ಶೀಘ್ರ ಕಾಮಗಾರಿ ಆರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನವಲೆ ಮಂಜುನಾಥ್, ರವೀಂದ್ರ, ಸ್ವಾಮಿ ಕುಮಾರ್, ದೇವರಾಜ್, ಗುರುರಾಜ್, ಶ್ರೀನಾಗ, ಶಿವಕುಮಾರ್ ಸೇರಿದಂತೆ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









