ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಮಾಸಿಕ ವೇತನ ಹೆಚ್ಚಳಕ್ಕೆ ಕೋರಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಅವರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ಕುರಿತಂತೆ ಆದೇಶ ಹೊರಡಿಸಿದೆ.
ಈ ಕುರಿತಂತೆ ಮಾತನಾಡಿರುವ ಅರುಣ್ ಅವರು, ಪರಿಷತ್ ಚುನಾವಣೆಯ ವೇಳೆ ನೀಡಿದ್ದ ಭರವಸೆಯಂತೆ ಈಗ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೆ. ಈಗ ಇಂತಹ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಅಧ್ಯಕ್ಷ ರ ಮಾಸಿಕ ಗೌರವಧನವನ್ನು 3 ಸಾವಿರ ರೂ.ನಿಂದ 6000 ರೂ.ಗೆ, ಉಪಾಧ್ಯಕ್ಷ ಗೌರವಧನ 2 ಸಾವಿರ ರೂ.ನಿಂದ 4 ಸಾವಿರ ರೂ.ಗೆ ಹಾಗೂ ಸದಸ್ಯರ ಗೌರವ ಧನವನ್ನು 1000 ರೂ.ನಿಂದ 2000 ರೂ. ಏರಿಸಲಾಗಿದೆ ಎಂದಿದ್ದಾರೆ.
Also read: ನಿರಪರಾಧಿ ಎಂದು ಕ್ಲೀನ್ ಚಿಟ್ ಸಿಕ್ಕರೂ ಸಿಗದ ಸಚಿವ ಸ್ಥಾನ: ಈಶ್ವರಪ್ಪ ಅಸಮಾಧಾನ
ಗೌರವಧನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, 2023ರ ಜನವರಿಯಿಂದ ಇದು ಜಾರಿಯಾಗಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post