ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಜ್ವಲ್ ರೇವಣ್ಣನಂತಹ #Prajwal Revanna ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ #PM Modi ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ #Rahul Gandhi ಆಗ್ರಹಿಸಿದರು.
ಅವರು ಇಂದು ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಜಾಧ್ವನಿ -2 ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ. ಆತನನ್ನು ಗೆಲ್ಲಿಸಿ ಎಂದು ಪ್ರಚಾರ ಮಾಡಿದ ತಪ್ಪಿಗೆ ಮತ್ತು ಪ್ರಜ್ವಲ್ ರೇವಣ್ಣ ಅವರು ದೇಶ ತೊರೆಯುವುದಕ್ಕೆ ಸಹಾಯ ಮಾಡಿದ್ದಕ್ಕಾಗಿ ನರೇಂದ್ರ ಮೋದಿ ರಾಷ್ಟ್ರದ ಕ್ಷಮೆ ಕೇಳಬೇಕು ಎಂದು ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದರು.
Also read: Anvesana Technology Business Incubator hosted a Startup Leadership Talk
ಪ್ರಜ್ವಲ್ ಒಬ್ಬ ಮಾಸ್ ರೇಪಿಸ್ಟ್ ಎಂದು ಬಿಜೆಪಿಯವರಿಗೆ ಗೊತ್ತಿದ್ದರೂ ಕೂಡ ಮೋದಿ ಅವರನ್ನು ಕರೆತಂದು ಅವರ ಪರ ಪ್ರಚಾರ ಮಾಡಿದವರು ಬಿಜೆಪಿಯವರು. ಇದು ರಾಷ್ಟ್ರದಲ್ಲಿಯೇ ಅತಿದೊಡ್ಡ ಲೈಂಗಿಕ ದೌರ್ಜನ್ಯವಾಗಿದೆ. ಕೇವಲ ಲೈಂಗಿಕ ದೌರ್ಜನ್ಯ ಮಾತ್ರವಲ್ಲ, ಆತ ಸಾಮೂಹಿಕ ಅತ್ಯಾಚಾರಿಯಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಂಜುನಾಥ್ ಭಂಡಾರಿ, ಸಚಿವ ಮಧು ಬಂಗಾರಪ್ಪ, ಟಿ.ಬಿ. ಜಯಚಂದ್ರ, ಕಿಮ್ಮನೆ ರತ್ನಾಕರ್, ಬೇಳೂರು ಗೋಪಾಲಕೃಷ್ಣ, ಸಂಗಮೇಶ್, ಆಯನೂರು ಮಂಜುನಾಥ್, ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post