ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ Dr. Virendra Hegde ಅಭಿಪ್ರಾಯಪಟ್ಟರು.
ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು.

ಮನಸೆಳೆದ ಮೆರವಣಿಗೆಯ ಕಲಾತಂಡಗಳು
ಬೆಳಗ್ಗೆ ಎನ್ಇಎಸ್ ಕಛೇರಿ ಮುಂಭಾಗದ ಎಸ್.ಆರ್.ನಾಗಪ್ಪಶೆಟ್ಟಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಪ್ರಾರಂಭವಾದ ಮೆರವಣಿಗೆಯಲ್ಲಿ ವೀರೇಂದ್ರ ಹೆಗ್ಗಡೆ ಹಾಗೂ ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅವರು ಕುಳಿತ ಸಾರೋಟು ಕಂಗೊಳಿಸಿತು. ಮೆರವಣಿಗೆಯಲ್ಲಿ ಮಕ್ಕಳಿಂದ ವಿವಿಧ ಕಲಾಪ್ರಕಾರಗಳು ಅನಾವರಗೊಂಡಿತು. ಕೀಲುಕುದುರೆ, ಲಂಬಾಣಿ ನೃತ್ಯ, ಕಂಸಾಳೆ, ತಟ್ಟಿರಾಯ ಗೊಂಬೆಗಳು ನೋಡುಗರ ಮನಸೆಳೆಯಿತು.
ಶಿವಮೊಗ್ಗ ಜಿಲ್ಲೆಯಿಂದ ದೇಶಕ್ಕಾಗಿ ತನುಮನ ಧನ ನೀಡಿದ ಸೈನಿಕರು ಹೆಚ್ಚು. ಅಂತಹ ರಾಷ್ಟ್ರಪ್ರೇಮವೇ ಎನ್ಇಎಸ್ ಸಂಸ್ಥೆಯಂತಹ ಸಮೂಹ ಮೂಡಿಬರಲು ಕಾರಣ. ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಎನ್ಇಎಸ್ ವಿದ್ಯಾರ್ಥಿಗಳು ವಿಶೇಷವಾಗಿ ಗುರುತಿಸಿಕೊಳ್ಳಬಲ್ಲರು. ದೇಶವನ್ನು ಒಟ್ಟುಗೂಡಿಸುವ ರಾಷ್ಟ್ರೀಯತೆ ಶುರುವಾದದ್ದೆ 1948 ರ ನಂತರ. ಅದರೇ 1946 ರಲ್ಲಿಯೇ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯತೆಯ ಪರಿಕಲ್ಪನೆಯನ್ನ ಮೆರೆದದ್ದು ಅದ್ಭುತ ಎಂದರು.

Also read: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೊಳಿಸಿ: ಕೇಂದ್ರ ಅರಣ್ಯ ಸಚಿವರಿಗೆ ಮನವಿ
ಕಾರ್ಯಕ್ರಮದಲ್ಲಿ ಎನ್ಇಎಸ್ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಜಿ.ರಾಮಚಂದ್ರಮೂರ್ತಿ, ಡಿ.ಎಸ್.ಅರುಣ್, ಅನಂತದತ್ತಾ, ಮಧುರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಎನ್ಇಎಸ್ ನೂತನ ಕೈಪಿಡಿ ಹಾಗೂ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.











Discussion about this post