ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಸಂಪೂರ್ಣ ಕಾಡು ನಾಶವಾಗುತ್ತಿದೆ. ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪ 40 ರಿಂದ 42 ಡಿಗ್ರಿ ತಲುಪುತ್ತಿದೆ. ಇದನ್ನು ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್‌ಕ್ಲಬ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಒಂದು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಇಂದು ಸೋಮಿನಕೊಪ್ಪದಲ್ಲಿರುವ ನ್ಯಾಯಾಂಗ ಬಡಾವಣೆಯಲ್ಲಿ ಹಿರಿಯ ರಂಗಕರ್ಮಿ ಕೆ.ವಿ. ಸುಬ್ಬಣ್ಣನವರ ಸಂಸ್ಮರಣೆಯಲ್ಲಿ ಸಸಿ ನೆಟ್ಟು ನಂತರ ಅವರು ಮಾತನಾಡಿದರು.

Also read: ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶ
ಶಿವಮೊಗ್ಗ ನಗರ ವೇಗವಾಗಿ ಬೆಳೆಯುತ್ತಿದೆ. ಬಡವರಿಗೆ ನಿವೇಶನವನ್ನು ಕಡಿಮೆ ದರದಲ್ಲಿ ನೀಡುವಂತಾಗಬೇಕು. ಕೆಲವೊಮ್ಮೆ ಕಾನೂನಿನ ಪ್ರಕಾರ ಇದನ್ನು ನೀಡಲಾಗುತ್ತಿಲ್ಲ. ಸೂಡಾದಿಂದ 14 ವರ್ಷಗಳ ಹಿಂದೆಯೇ 104 ಎಕರೆ ಜಮೀನನ್ನು ಗೋಪಿಶೆಟ್ಟಿಕೊಪ್ಪದಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಅಲ್ಲಿನ ಕೆಲವು ರೈತರು ಜಮೀನು ಕೊಡಲು ಒಪ್ಪಿಕೊಂಡಿದ್ದಾರೆ. ಇನ್ನು ಕೆಲವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಸೂಡಾ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಕಾರ್ಯದರ್ಶಿ ಪಾರ್ವತಮ್ಮ, ಶಿವಮೊಗ್ಗ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೆರಿಗೆ, ಹಿರಿಯ ಪತ್ರಕರ್ತರಾದ ಗೋಪಾಲ ಯಡಗೆರೆ, ಶ್ರೀಕಾಂತ್ ಕಾಮತ್, ವಾರ್ತಾಧಿಕಾರಿ ಮಾರುತಿ, ಸಂಘದ ಉಪಾಧ್ಯಕ್ಷರಾದ ವೈದ್ಯನಾಥ್, ಹಾಲಸ್ವಾಮಿ, ನಗರ ಕಾರ್ಯದರ್ಶಿ ಕೆ.ಆರ್. ಸೋಮನಾಥ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post