ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾನೇ ಹೆತ್ತ ಮಗಳನ್ನು ಮಚ್ಚಿನಿಂದ ಹತ್ಯೆ ಮಾಡಿದ ತಾಯಿ, ತಾನೂ ಸಹ ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್’ನಲ್ಲಿ ನಡೆದಿದೆ.
ಹತ್ಯೆಯಾದ ಬಾಲಕಿಯನ್ನು ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ಹಾಗೂ ಹತ್ಯೆ ಮಾಡಿದ ತಾಯಿಯನ್ನು ಶೃತಿ (38) ಎಂದು ಗುರುತಿಸಲಾಗಿದೆ.
ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್’ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ. ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶೃತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂಬುದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಗಂಡ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಕರ್ತವ್ಯದಲ್ಲಿದ್ದು, ಬೆಳಿಗ್ಗೆ ಮನೆಗೆ ಬಂದು ನೀಡಿದಾಗ ವಿಷಯ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post