ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರಿಂದ ಬರುವ ತಿಂಗಳ 27ರಂದು ಉದ್ಘಾಟನೆಗೆ ಸಜ್ಜಾಗಿರುವ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ಕನಸಿನ ಶಿವಮೊಗ್ಗ ವಿಮಾನ ನಿಲ್ದಾಣವನ್ನು Shivamogga Airport ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪ್ರಮುಖ ಮಠಗಳ ಮಠಾಧೀಶರ ನಿಯೋಗದೊಂದಿಗೆ ನಿನ್ನೆಯ ದಿವಸ ಭೇಟಿ ಮಾಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು, ಸೂಡಾ ಮಾಜಿ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್ ಅವರು, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ?ಡಾಕ್ಷರಿ, ಶಿಮುಲ್ ಅಧ್ಯಕ್ಷರಾದ ಶ್ರೀಪಾದ್ ಹೆಗಡೆ, ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕರಾದ ದಿವಾಕರ್ ಶೆಟ್ಟಿ, ಎಮ್.ಎಸ್.ಐ.ಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post