ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿ, ಶಿರಾಳಕೊಪ್ಪ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 50 ಹಾಸಿಗೆ ಮೇಲ್ದರ್ಜೆಗೆ ಹಾಗೂ ಪಟ್ಟಣದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 60 ರಿಂದ 100 ಹಾಸಿಗೆಗಳಿಗೆ ಮತ್ತು 100 ರಿಂದ 150 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಸಂಸದ ಬಿ. ವೈ. ರಾಘವೇಂದ್ರ MP B Y Raghavendra ಅವರು ನೆರವೇರಿಸಿದರು.
ನಿಕಟಪೂರ್ವಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, B S Yadiyurappa ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, Minister Sudhakar ನಗರಾಭಿವೃದ್ಧಿ ಭೈರತಿ ಬಸವರಾಜ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ. ಎಸ್ ಗುರುಮೂರ್ತಿ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಆರೋಗ್ಯ ಕಲ್ಯಾಣಾಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ, ಡಾ. ಚಂದ್ರಪ್ಪ, ತಾಲೂಕು ಆರೋಗ್ಯ ಅಧಿಕಾರಿಗಳು, ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಪ್ಪ ಹಾಗೂ ಶಿಕಾರಿಪುರ/ ಶಿರಾಳಕೊಪ್ಪ ಪುರಸಭೆ ಪಟ್ಟಣ ಪಂಚಾಯತ್ ಅಧ್ಯಕ್ಷರು ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Also read: ಶಿವಮೊಗ್ಗ: ಸಿಮ್ಸ್ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post