ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು, ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ #Minister Gajendra Singh Shekawath ಅವರನ್ನು ಭೇಟಿಯಾಗಿ ಚರ್ಚಿಸಿದರು.
ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ ಸಹಾಯದ ಅಡಿಯಲ್ಲಿ ಪಡುವಾರ್ಲ್-ಸೋಮೇಶ್ವರ-ಕೊಲ್ಲೂರು ಆಧ್ಯಾತ್ಮಿಕ ಪ್ರವಾಸೋದ್ಯಮ ಕ್ಲಸ್ಟರ್ ಅನ್ನು ಸ್ಥಾಪಿಸುವ ಜೊತೆಗೆ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತಿ ಎತ್ತರದ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆಯ ನಿರ್ಮಾಣ ಮತ್ತು ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳುವ ವಿನಂತಿಯನ್ನು ಪುನರುಚ್ಚರಿಸಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗದ ಪ್ರವಾಸೋದ್ಯಮ ಬೆಳವಣಿಗೆಗೆ ಈ ಯೋಜನೆಗಳಿಗೆ ನಿರಂತರ ಬೆಂಬಲ ನೀಡುವುದಾಗಿ ಮತ್ತು ಈ ವಿಷಯಗಳಿಗೆ ಸಕಾರಾತ್ಮಕ ಪ್ರತಿಕ್ರಿಯ ನೀಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಸಂಸದ ರಾಘವೇಂದ್ರ ಅವರು ಧನ್ಯವಾದ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















