No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ: ಸಂಸದ ರಾಘವೇಂದ್ರ ಸೂಚನೆ

ಸರ್ಕಾರಿ ನೌಕರರ ಸುಸಜ್ಜಿತ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ...

kalpa News by kalpa News
July 7, 2021
in ಶಿವಮೊಗ್ಗ
0
ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ: ಸಂಸದ ರಾಘವೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ಥಾಪನೆಗೊಂಡು ಶತಮಾನೋತ್ಸವ ಆಚರಿಸುತ್ತಿರುವ ಶುಭಸಂದರ್ಭದಲ್ಲಿ 12ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ, ಮಾದರಿ ಹಾಗೂ ಸುಸಜ್ಜಿತ ಸಭಾಭವನ ನೌಕರರ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ನಗರದ ಕೆ.ಇ.ಬಿ.ವೃತ್ತದಲ್ಲಿ ಹಳೆಯ ನೌಕರರ ಭವನದ ಆವರಣದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿದ ನಂತರ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಕಳೆದ ದಶಕಗಳ ಅವಧಿಯಲ್ಲಿ ನೌಕರರ ಸಂಘವು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಮತ್ತು ಅವಲಂಬಿತರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ನೇತೃತ್ವ ವಹಿಸಿದ ಸಂಘದ ಪದಾಧಿಕಾರಿಗಳೆಲ್ಲರ ಶ್ರಮ ಮೆಚ್ಚುವಂತದ್ದಾಗಿದೆ ಎಂದರು.

ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದ ಕಾಮಗಾರಿ ಮುಂದಿನ 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳುವ ವಿಶ್ವಾಸ ಹೊಂದಿದ್ದು, ನೌಕರರು ಸರ್ಕಾರ ಮತ್ತು ರಾಜ್ಯದ ಜನರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರದ ಬಹುತೇಕ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ನೌಕರರ ಕಾರ್ಯ ಮಹತ್ವದ್ದಾಗಿದೆ. ಸರ್ಕಾರವೂ ಕೂಡ ತನ್ನ ಆದಾಯದ ಬಹುಪಾಲನ್ನು ಆಡಳಿತ ವ್ಯವಸ್ಥೆಗೆ ವಿನಿಯೋಗಿಸುತ್ತಿದೆ ಎಂದರು.

ನೌಕರರು ತಾವು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಹಾಗೂ ಕೆಲಸಕ್ಕಾಗಿ ಬರುವ ಸಾರ್ವಜನಿಕರು ತಮ್ಮ ಕೆಲಸದ ನಂತರ ನೆಮ್ಮದಿಯಿಂದ ಹಿಂದಿರುಗುವಂತೆ ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮ ಸೇವೆ ನೀಡಿ ಮಾನವೀಯತೆ ಮೆರೆಯುವಂತೆ ಅವರು ನೌಕರರಿಗೆ ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ಜೀವಮಾನವಿಡೀ ತಮ್ಮ ಅಮೂಲ್ಯ ಸಮಯವನ್ನು ಕಚೇರಿಯಲ್ಲಿಯೇ ಕಳೆದು ನಿವೃತ್ತರಾಗುವ ನೌಕರರ ಬದುಕು ಕೂಡ ಹಸನಾಗಬೇಕು. ಅವರು ತಮ್ಮ ನಿವೃತ್ತಿಯ ಜೀವನವನ್ನು ನೆಮ್ಮದಿಯಿಂದ ಕಳೆಯುವಂತಾಗಬೇಕು. ಅದಕ್ಕಾಗಿ ಸರ್ಕಾರವು ಘೋಷಿಸಿ, ಅನುಷ್ಠಾನಕ್ಕೆ ತಂದಿರುವ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮುಂದುವರೆಸಲು ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಎಸ್.ಜ್ಯೋತಿ ಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸೂಡಾ ಆಯುಕ್ತ ಎಂ. ಕರಭೀಮಣ್ಣನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಡಾ. ನಾಗರಾಜ ನಾಯ್ಕ್, ರಾಜ್ಯ ಸಂಘದ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ, ಕೋಶಾಧ್ಯಕ್ಷ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಎಂ.ಪಿ.ಎಲ್. ಸ್ಪೋರ್ಟ್ಸ್ ಫೌಂಡೇಶನ್, ಕೋವಿಡ್ ಸಹಯೋಗ್, ಪಿ.ಇ.ಎಸ್. ಟ್ರಸ್ಟ್, ಸ್ಪರ್ಶ ಹಾಸ್ಪಿಟಲ್, ಯುನೈಟೆಡ್‌ವೇ ಬೆಂಗಳೂರು, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಲಸಿಕಾ ಅಭಿಯಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದಲ್ಲಿಯೇ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಲಾಗಿರುವ ಒ.ಎಂ.ಆರ್. ಶೀಟ್‌ನ್ನು ಸಂಸದ ಬಿ.ವೈ.ರಾಘವೇಂದ್ರ ಹಾಗೂ ಗಣ್ಯರು ಬಿಡುಗಡೆಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಿಡುಗಡೆಗೆ ಶಾಸಕ ಹಾಲಪ್ಪ ಮನವಿ

Next Post

ಕುವೆಂಪು ವಿಶ್ವವಿದ್ಯಾನಿಲಯ: ನವೀನ ಸಂಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

kalpa News

kalpa News

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿಶ್ವವಿದ್ಯಾನಿಲಯ: ನವೀನ ಸಂಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL