No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ರಾಘವೇಂದ್ರ ಸೂಚನೆ

kalpa News by kalpa News
October 12, 2021
in ಶಿವಮೊಗ್ಗ
0
ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ರಾಘವೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರವು ರೂಪಿಸಿ ವಿವಿಧ 47 ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ತೃಪ್ತಿಕರವಾಗಿದೆ. ಅಲ್ಲದೇ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆ ಅಗ್ರಪಂಕ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸಪರಿಕಲ್ಪನೆಯ ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅಧಿಕಾರಿಗಳು ಸೂಕ್ತ ಮಾಹಿತಿ ಒದಗಿಸಿದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದೆಂದ ಅವರು, ದೇಶದಲ್ಲಿಯೇ ಮಾದರಿ ಜಿಲ್ಲೆ ನಿರ್ಮಾಣ ಮಾಡುವಲ್ಲಿ ಅಗತ್ಯ ಸಲಹೆ-ಸೂಚನೆ ನೀಡುವಂತೆ ತಿಳಿಸಿದರು.

ಮೊಬೈಲ್ ಹಾಗೂ ಇಂಟರ್‌ನೆಟ್ ಬಳಕೆದಾರರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವುದರ ಜೊತೆಗೆ ಅವರ ನಿರೀಕ್ಷೆಗೆ ತಕ್ಕಂತೆ ನೆಟ್‌ವರ್ಕ್ ಸೇವೆಯನ್ನು ಒದಗಿಸುವಲ್ಲಿ ಅನೇಕ ನ್ಯೂನತೆಗಳನ್ನು ಗಮನಿಸಲಾಗಿದ್ದು, ಅವುಗಳ ಪರಿಹಾರಕ್ಕಾಗಿ ಖಾಸಗಿ ಟೆಲಿಕಾಂ ಸಂಸ್ಥೆಗಳ ಸಹಯೋಗದೊಂದಿಗೆ ಮೊಬೈಲ್ ಟವರ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ ಈ ಸಮಸ್ಯೆಯ ಪರಿಹಾರಕ್ಕಾಗಿ ಕೇಂದ್ರ ಸಚಿವರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರದಲ್ಲಿ ಸಮಸ್ಯೆಗೆ ಪರಿಹಾರ ದೊರಕುವ ವಿಶ್ವಾಸವಿರುವುದಾಗಿ ಅವರು ತಿಳಿಸಿದರು.

2018-19 ಹಾಗೂ 2019-20ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಾರರಿಗೆ ಬೆಳೆವಿಮೆ ಪಾವತಿಯಾಗದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಸಂಬಂಧ ಕೃಷಿ, ತೋಟಗಾರಿಕೆ, ಬ್ಯಾಂಕ್ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಲ್ಲಿ ಸಭೆ ನಡೆಸಿ, ಸಂತ್ರಸ್ಥ ರೈತರಿಗೆ ಪರಿಹಾರಧನ ದೊರಕಿಸಿಕೊಡುವಂತೆ ಸಂಸದರು ಸೂಚಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಅನುಕೂಲವಾಗುವಂತೆ ಸರ್ಕಾರಿ ಶಾಲೆಗಳಿಗೆ ನೆಟ್‌ವರ್ಕ್ ಸೇವೆಯನ್ನು ಒದಗಿಸಿಕೊಡುವುದರ ಜೊತೆಗೆ ಅಲ್ಲಿನ ಬಳಕೆದಾರರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆಯೂ ಗಮನಹರಿಸಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸ್ವತಃ ೨೦ಲಕ್ಷ ಹಾಗೂ ಜಿಲ್ಲೆಯ ಇತರೆ ಶಾಸಕರ ನಿಧಿಯಿಂದ ಹಣವನ್ನು ಕ್ರೋಢೀಕರಿಸಿ, ಮುಂದಿನ ಒಂದು ತಿಂಗಳೊಳಗಾಗಿ ಸೌಲಭ್ಯ ಕಲ್ಪಿಸಿಕೊಡಲು ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಈ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಹಾಗೂ ತ್ವರಿತ ಸೇವೆಯನ್ನು ಒದಗಿಸಲು ಬಂಡವಾಳ ಹೂಡಿಕೆದಾರರನ್ನು ಆಹ್ವಾನಿಸಲಾಗಿದೆ ಎಂದರು.

ಜಿಲ್ಲೆಯ ಸ್ತ್ರೀಶಕ್ತಿ ಗುಂಪುಗಳಿಗೆ ನೀಡಲಾಗುತ್ತಿರುವ 15,000ರೂ. ಗಳ ಸುತ್ತುನಿಧಿ ಉದ್ದೇಶಿತ ಕಾರ್ಯಕ್ಕೆ ಸದ್ಬಳಕೆಯಾಗಬೇಕು. ಹೆಚ್ಚಿನ ಉಳಿತಾಯ ಮಾಡುವ ಹಾಗೂ ಉಳಿತಾಯದ ಹಣವನ್ನು ಸದ್ವಿನಿಯೋಗ ಮಾಡುತ್ತಿರುವ ಗುಂಪುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಪ್ರಶಸ್ತಿಪುರಸ್ಕಾರ ನೀಡಿ ಗೌರವಿಸುವಂತೆ ಅವರು ಸಲಹೆ ನೀಡಿದರು.

ಉಜ್ವಲ್ ಭರವಸೆ ಯೋಜನೆಯಡಿ ವಿದ್ಯುತ್ ಬಳಕೆದಾರರಿಗೆ ರಿಯಾಯಿತಿ ದರದಲ್ಲಿ ನೀಡಲಾಗತ್ತಿರುವ ಬಲ್ಬ್, ಟ್ಯೂಬ್‌ಲೈಟ್‌ಗಳ ಮಾರಾಟ ಮಾಡುವ ಕುರಿತು ಗುತ್ತಿಗೆ ಪಡೆದ ಗುತ್ತಿಗೆದಾರರ ಕಾರ್ಯವೈಖರಿ ಸಮಾಧಾನಕರವಾಗಿಲ್ಲ. ಸರ್ಕಾರದ ಯೋಜನೆ ಸಫಲಗೊಳ್ಳುವಲ್ಲಿ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳ ಮನೆ ನಿರ್ಮಿಸಿಕೊಳ್ಳಲು ತಾಂತ್ರಿಕ ತೊಡಕು ಉಂಟಾಗಿದೆ. ಈ ತೊಡಕಿಗೆ ಕಾರಣಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಿ, ಫಲಾನುಭವಿಗಳು ಸಕಾಲದಲ್ಲಿ ಮನೆ ನಿರ್ಮಿಸಿಕೊಳ್ಳಲು ಅಧಿಕಾರಿಗಳು ಅವಕಾಶ ನೀಡುವುದರ ಜೊತೆಗೆ ಸೌಲಭ್ಯ ಒದಗಿಸಬೇಕು. ಅಲ್ಲದೇ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಶೌಚಾಲಯಗಳ ನಿರ್ಮಾಣದಲ್ಲಿ ಶೇ.100ರಷ್ಟು ಗುರಿಸಾಧನೆ ಮಾಡಬೇಕು. ಈಗಾಗಲೇ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚ ಸಂಕೀರ್ಣ ಘಟಕಗಳನ್ನು ನಿರ್ಮಿಸಲಾಗಿದ್ದು, ಅವುಗಳು ಸದ್ಭಳಕೆಯಾಗುವಂತೆ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ದಿಶಾ ಸಮಿತಿಯ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯ ನಾಗರಾಜ್‌ ಅವರಿಗೆ ರಾಷ್ಟ್ರೀಯ ಯೋಗಿ-ಯೋಗ ಅವಾರ್ಡ್…

Next Post

ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು

kalpa News

kalpa News

Next Post
ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು

ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL