ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಮತ ಹಾಕಿದ್ದಕ್ಕಾಗಿಯೇ ಕಾಂಗ್ರೆಸ್ ಸರ್ಕಾರ ಈಗ ಅಧಿಕಾರಕ್ಕೆ ಬಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಟಕ್ಕರ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ವಿರುದ್ಧ ರಾಜ್ಯಪಾಲರ ಬಳಿ ಆರ್’ಟಿಐ ಕಾರ್ಯಕರ್ತ ಅಬ್ರಾಹಂ ನೀಡಿರುವ ದೂರಿನ ವಿಚಾರದಲ್ಲಿ ಕಾಂಗ್ರೆಸ್ ನವರು ಹಾದಿ ಬೀದಿಯಲ್ಲಿ ಹೋಗುವರೆಲ್ಲಾ ದೂರು ನೀಡಿದ್ದಾರೆ ಎಂಬ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.

Also read: ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಅಹಿಂದ ಭಾಷಣ ಮಾಡಿಕೊಂಡು ಅಧಿಕಾರಕ್ಕೆ ಬಂದ ಸಿಎಂ ಸಿದ್ಧರಾಮಯ್ಯ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ವ್ಯವಹಾರ ವಿರೋಧಿಸಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ಇಲ್ಲಿಯವರೆಗೂ ಯಾವುದೇ ಪರಿಹಾರ ರಾಜ್ಯ ಸರ್ಕಾರದಿಂದ ನೀಡಿಲ್ಲ ಪರಿಶಿಷ್ಟ ವರ್ಗದವರ ಹಣ ಕಾಪಾಡುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post