ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆ ವಿಮಾನ ನಿಲ್ದಾಣ #Shivamogga Airport ಆರಂಭವಾಗಿ ನಿರಂತರವಾಗಿ ವಿಮಾನ ಹಾರಾಟ ಯಶಸ್ವಿಯಾಗಿ ಎರಡು ವರ್ಷ ಕಳೆಯುವುದರ ಒಳಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಪ್ರಯತ್ನ ನಡೆಸಿದ್ದಾರೆ.
ಹೌದು… ಕರಾವಳಿ ವ್ಯಾಪ್ತಿಯ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಈ ಪ್ರಯತ್ನ ಆರಂಭಿಸಿರುವ ಸಂಸದರು, ಈ ಕುರಿತಂತೆ ಮಂಜೂರಾತಿಗಾಗಿ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಹ ಸಲ್ಲಿಸಿದ್ದಾರೆ.
Also read: ಪ್ರಕೃತಿಯ ಮುನಿಸಿಗೆ ನೂರಾರು ಜನರ ಬದುಕು ನಾಶ | ಸಮೃದ್ಧ ಊರಿನ ದುರಂತ ಅಂತ್ಯ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿ¯್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಮನವಿಯ ಬಗ್ಗೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸಂಸದರೊAದಿಗೆ ತೆರಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post