ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜನ ಹಿತಕ್ಕಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ಹಾಗೂ ಯೋಜನೆಗಳನ್ನು ರದ್ದುಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡದೇ ಇದ್ದಲ್ಲಿ ರೈತ ಮೋರ್ಚಾ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಾಲೆಕೊಪ್ಪ ರಾಮಚಂದ್ರ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ರೈತಪರ ರಾಜ್ಯದ ರೈತರಿಗೆ ಅನೇಕ ಯೋಜನೆಗಳು ಮತ್ತು ಕೃಷಿ ಗೊಬ್ಬರಕ್ಕೆ ಸಬ್ಸಿಡಿ ಕೊಟ್ಟಿರುವುದು ಹೆಮ್ಮೆಯಾಗಿದೆ . ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ ಸರ್ಕಾರದ ಎಪಿಎಂಸಿ ಕಾಯ್ದೆ ರದ್ದು, ಕಿಶನ್ ಸಮ್ಮಾನ್ ಯೋಜನೆಯಲ್ಲಿ ಕಡಿತ, ಗೋ ಹತ್ಯೆ ನಿಷೇಧ ಕಾಯ್ದೆ ವಾಪಾಸ್, ರೈತರಿಗೆ ವಿದ್ಯುತ್ ದರ ಹೆಚ್ಚು ಮಾಡಿರುವುದು ಖಂಡನೀಯ ಎಂದರು.
Also read: ತಪಾಸಣೆ ವೇಳೆ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಆರೋಪಿ
ರಾಜ್ಯ ಸರ್ಕಾರ ತನ್ನ ನಿರ್ಧಾರಗಳನ್ನು ಕೈಬಿಡಬೇಕು. ಇಲ್ಲದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಸಾಲೆಕೊಪ್ಪ ರಾಮಚಂದ್ರ ಹೇಳಿದ್ದೇನು?
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅವಧಿಯಲ್ಲಿ ಜಾರಿಗೆ ತಂದಿದ್ದ ಐಎಪಿಎಂಸಿ ಕಾನೂನು, ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆತ, ಕಿಸಾನ್ ಸನ್ಮಾನಿಧಿ ಯೋಜನೆ, ರೈತ ಶಕ್ತಿ ಯೋಜನೆ, ಕೃಷಿ ಭೂಮಿ ಮಾರಾಟ ಕಾಯ್ದೆಗಳ ರದ್ದು, ನೀರಾವರಿ ಯೋಜನೆಗಳ ನಿರ್ಲಕ್ಷ್ಯ, ವಿದ್ಯುತ್ ದರ ಏರಿಕೆ, ರೈತ ವಿದ್ಯಾನಿಧಿ ಯೋಜನೆ ರದ್ದು ಜಿಲ್ಲೆಗೊಂದು ಗೋಶಾಲೆ ಯೋಜನೆ ರದ್ದು, ಭೂಸಿರಿ ಯೋಜನೆ ರದ್ದು ಹೀಗೆ ಅನೇಕ ಜನಪರ ಯೋಜನೆಗಳನ್ನು ಮತ್ತು ಅನೇಕ ಕಾಯ್ದೆಗಳನ್ನು ರದ್ದುಪಡಿಸಿರುವ ಕ್ರಮವನ್ನು ಸಾಲೆಕೊಪ್ಪ ರಾಮಚಂದ್ರ ಕಟುವಾಗಿ ಟೀಕಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಕೆಟ್ಟ ತೀರ್ಮಾನವನ್ನು ಬಿಜಿಜೆ ಕಟುವಾಗಿ ಟೀಕಿಸುತ್ತದೆ. ಸರ್ಕಾರ ತತಕ್ಷಣವೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ರೈತ ಮೋರ್ಚಾ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ವಿನ್ಸೆಟ್ ರೋಡ್ರಿಗಸ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸಿ.ಎಚ್. ಮಾಲತೇಶ್, ಗ್ರಾಮಾಂತರ ಮಾಜಿ ಅಧ್ಯಕ್ಷ ವಿರೂಪಾಕ್ಷ ಪ್ಪ, ಕೆ.ವಿ. ಅಣ್ಣಪ್ಪ, ಚಂದ್ರಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post