No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೆಳೆ ನಷ್ಟ ಪ್ರಮಾಣ ನಮೂದಿಸುವಲ್ಲಿ ವಿಫಲ: ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಎಚ್ಚರಿಕೆ

kalpa News by kalpa News
December 6, 2025
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅತಿವೃಷ್ಟಿಯಿಂದ ಬೆಳೆನಷ್ಟ ಮತ್ತು ರೈತರ ಸಮಸ್ಯೆಗಳು ಹಾಗೂ ಬೆಳೆವಿಮೆ ಬಗ್ಗೆ ಚರ್ಚಿಸಲು ಇಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಅವರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಳೆವಿಮೆಗಾಗಿ ಈಗಾಗಲೇ ಕೇಂದ್ರದಿಂದ 52 ಕೋಟಿ, ರಾಜ್ಯದಿಂದ 52 ಕೋಟಿ ಮತ್ತು ರೈತರಿಂದ 23 ಕೋಟಿ ವಿಮಾ ಕಂತಿನ ಹಣವನ್ನು ಪಾವತಿಸಿದ್ದು, ವಿಮಾ ಕಂಪನಿಯಿಂದ ಕೇವಲ 113 ಕೋಟಿ ಮಾತ್ರ ರೈತರಿಗೆ ಪರಿಹಾರ ಬಂದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯ ಶೇ.75ರಷ್ಟು ಮಳೆ ಮಾಪಕಗಳು ಹಾಳಾಗಿದೆ. ಪರಿಹಾರ ಘೋಷಣೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಕಂತು ಕಟ್ಟಿದ ಹಣದಷ್ಟು ಕೂಡ ಪರಿಹಾರ ಬಂದಿಲ್ಲ. ಅಧಿಕಾರಿಗಳು ಸಲ್ಲಿಸಿದ ಬೆಳೆನಷ್ಟದ ಪ್ರಮಾಣದಲ್ಲಿ ಬಹಳ ವ್ಯತ್ಯಾಸವಿದೆ. ಅವರು ಸೂಚಿಸಿದ್ದಕ್ಕಿಂತ 100 ಮಳೆ ಹೆಚ್ಚಾಗಿದೆ. ಅನೇಕ ಗೊಂದಲಗಳಿಂದಾಗಿ ವಿಮೆಯನ್ನು ಕಟ್ಟಿದ ರೈತರಿಗೆ ನಷ್ಟದ ಪ್ರಮಾಣದಲ್ಲಿ ಅಂಕಿಅಂಶಗಳ ವ್ಯತ್ಯಯದಿಂದಾಗಿ ವಿಮಾಮೊತ್ತ ಕಡಿಮೆ ಬಂದಿದೆ. ಇದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದು, ಅದರ ಚರ್ಚೆಗೆ ವಿಶೇಷ ಸಭೆ ಕರೆದಿತ್ತು. ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಓ ಒಂದು ವಾರದಲ್ಲಿ ಎಲ್ಲವನ್ನು ಸರಿಪಡಿಸುವ ಆಶ್ವಾಸನೆ ಕೊಟ್ಟಿದ್ದಾರೆ. ಯಾವ ರೈತರಿಗೂ ಅನ್ಯಾಯ ಆಗದ ರೀತಿಯಲ್ಲಿ ಬೆಳೆವಿಮೆ ದೊರಕಿಸಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.

ನಾನು ಈಗಾಗಲೇ ಕೇಂದ್ರ ಕೃಷಿ ಸಚಿವ ಶಿವರಾಜ್‍ಸಿಂಗ್ ಚೌವ್ಹಾಣ್ ಅವರನ್ನು ಭೇಟಿಮಾಡಿ, ಮಲೆನಾಡು ಭಾಗದ ರೈತರ ಸಮಸ್ಯೆಗಳ ಬಗ್ಗೆ ವಿವರಿಸಿದ್ದೇನೆ. ಅಡಿಕೆಗೆ ಬಂದ ಕೊಳೆರೋಗ ಮತ್ತು ಹಳದಿ ಎಲೆ ರೋಗದ ಬಗ್ಗೆಯೂ ಅವರಿಗೆ ವಿವರಿಸಿದ್ದು, ಆಮದು ಅಡಿಕೆಯನ್ನು ಕಡಿಮೆ ಮಾಡಬೇಕು ಎಂದು ವಿನಂತಿಸಿಕೊಂಡಿದ್ದೇನೆ ಎಂದರು.
ಮಳೆ ಮಾಪಕ ಇರುವ ಕೆಲವೆಡೆ ಮೇಲ್ಗಡೆಗೆ ಛಾವಣಿಹಾಕಿದ್ದು ಇದರಿಂದ ಮಳೆ ಮಾಪನದಲ್ಲಿ ವ್ಯತ್ಯಾಸ ಆಗಿ ತಪ್ಪು ಅಂಕಿ ಅಂಶಗಳಿಂದ ರೈತರ ಬೆಳೆನಷ್ಟ ಪ್ರಮಾಣ ನಮೂದಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಬಗ್ಗೆ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಕೆಲವುಕಡೆ ರೈತರಿಗೆ ಹೆಕ್ಟೇರ್‍ವೊಂದಕ್ಕೆ ಅಡಿಕೆಗೆ 6000 ರೂ. ಪರಿಹಾರ ನೀಡಲಾಗಿದೆ. ಕೆಲವು ರೈತರಿಗೆ ಕೇವಲ 600 ರೂ. ಬಂದಿದೆ. ಸಂಸತ್‍ನಲ್ಲಿ ನಾನು ಈ ಬಗ್ಗೆ ಧ್ವನಿ ಎತ್ತಿದ್ದೇನೆ ಎಂದರು. ನಮ್ಮ ದೇಶದಲ್ಲಿ ಆಮದು ಅಡಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಕಾರಣ ಇಲ್ಲಿ ಅಡಿಕೆ ಉತ್ಪನ್ನಗಳ ಬೇಡಿಕೆ ಹೆಚ್ಚಾಗಿದ್ದು, ಕೇವಲ 300 ಕೋಟಿಯಷ್ಟು ರಫ್ತಾಗುತ್ತಿದೆ ಎಂಬುದನ್ನು ಕೃಷಿ ಸಚಿವರು ಸಂಸತ್ತಿನಲ್ಲಿ ತಿಳಿಸಿದ್ದಾರೆ. ನಮ್ಮ ರೈತರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆಯನ್ನು ಬೆಳೆದರೂ ನಮ್ಮ ದೇಶದಲ್ಲಿ ಬೇಡಿಕೆ ಇದೆ ಎಂದರು.

ಇಂಡಿಗೋ ವಿಮಾನಗಳು ರದ್ದಾದ ಹಿನ್ನಲೆಯಲ್ಲಿ ಶಿವಮೊಗ್ಗ ಮತ್ತು ರಾಜ್ಯ ಸೇರಿದಂತೆ ಸಾವಿರಾರು ಪ್ರಯಾಣಿಕರಿಗೆ ಆದ ತೊಂದರೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ವಿಮಾನಯಾನ ವ್ಯವಸ್ಥೆಯಲ್ಲಿ ತೊಂದರೆಯಾಗಿದೆ. ಇಂಡಿಗೋ ಮತ್ತು ಜೆಟ್‍ಕ್ರಾಫ್ಟ್ ನಡುವಿನ ಶೀತಲಸಮರದಿಂದ ಈ ಸಮಸ್ಯೆ ಉದ್ಭವವವಾಗಿದ್ದು, ಭಾರತೀಯ ವಿಮಾನಯಾನ ಪ್ರಾಧಿಕಾರ ಇಂಡಿಗೋ ವಿಮಾನಯಾನ ಸಂಸ್ಥೆಗೆ ಕಳೆದ ಎರಡು ವರ್ಷದಿಂದ ಎಚ್ಚರಿಕೆಯ ನೋಟೀಸ್ ಕೊಡುತ್ತಾ ಬಂದಿದೆ. ಇಂಡಿಗೋ ಸಂಸ್ಥೆಯಿಂದ ಪ್ರಾಧಿಕಾರದ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. 36,000 ಪೈಲೆಟ್‍ಗಳ ಹುದ್ದೆ ಖಾಲಿಯಿದ್ದು, ಈಗ ಕಾರ್ಯನಿರ್ವಹಿಸುವ ಪೈಲೆಟ್‍ಗಳಿಗೆ 16 ಗಂಟೆ ಕೆಲಸ ನೀಡಿದ್ದು ಕೂಡ ಆಕ್ರೋಶಕ್ಕೆ ಕಾರಣವಾಗಿದ್ದು,  ಅವರು ಪ್ರತಿಭಟನೆಗೆ ಇಳಿದಿದ್ದಾರೆ. ಅನೇಕ ಬಾರಿ ಕೇಂದ್ರ ಸರ್ಕಾರ, ವಿಮಾನಯಾನ ಪ್ರಾಧಿಕಾರ, ವಿಮಾನ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದರೂ ಅವರು ಸರಿಪಡಿಸಿಕೊಳ್ಳದೇ ಇದ್ದದ್ದು ಈ ಸಮಸ್ಯೆಗೆ ಕಾರಣವಾಗಿದ್ದು, ಸಾರ್ವಜನಿಕರಿಗಾದ ನಷ್ಟವನ್ನು ವಿಮಾನಯಾನ ಸಂಸ್ಥೆಗಳೇ ತುಂಬಿಕೊಡಬೇಕು ಎಂದರು.

https://kalpa.news/wp-content/uploads/2024/04/VID-20240426-WA0008.mp4

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಕೃಷಿ ಅಧಿಕಾರಿ ಕಿರಣ್‍ಕುಮಾರ್, ಮಾಜಿ ಶಾಸಕ ಅಶೋಕ್‍ನಾಯ್ಕ್, ಅಜಿತ್, ಮಲ್ಲಿಕಾರ್ಜುನ ಹಕ್ರೆ, ಟಿ.ಡಿ. ಮೇಘರಾಜ್, ಸಿದ್ಧಲಿಂಗಪ್ಪ, ಗಣೇಶ್ ಬಿಳಕಿ, ಕೆ.ವಿ. ಅಣ್ಣಪ್ಪ, ಸುನೀತಾ ಅಣ್ಣಪ್ಪ, ಸಂತೋಷ್ ಬಳ್ಳೇಕೆರೆ, ರಾಜೇಶ್ ಕಾಮತ್, ಕೃಷಿ ಇಲಾಖೆಯ ಅಧಿಕಾರಿಗಳು, ರೆವಿನ್ಯೂ ಅಧಿಕಾರಿಗಳು, ವಿಮಾ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.8ರಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಕೆ.ಈ. ಕಾಂತೇಶ್

Next Post

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

kalpa News

kalpa News

Next Post
ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL