ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು 10,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.
ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ. ಶಶಿಧರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ
ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಮೊಹಮ್ಮದ್ ಆಸಿಫ್ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 10,000 ರೂ. ನಗದು ಮತ್ತು ಅಧಿಕಾರಿ ಎ.ಪಿ. ಶಶಿಧರನನ್ನು ವಶಕ್ಕೆ ಪಡೆದಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್ ಹಣಕ್ಕೆ ಬೇಡಿಕೆ ಎಂದು ದೂರಲಾಗಿದೆ.
ಇದರ ಬಗ್ಗೆ ವಾಯ್ಸ್ ರೆಕಾರ್ಡ್ ಅನ್ನು ಲೋಕಾಯುಕ್ತಕ್ಕೆ ಮೊಹಮ್ಮದ್ ಆಸಿಫ್ ಅವರು ನೀಡಿದ್ದರು ಎಂದು ವರದಿಯಾಗಿದೆ.
ನಿನ್ನೆ ಸಂಜೆ ವೇಳೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post