ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ರಾತ್ರಿ ಬಜರಂಗದಳ #Bajarangadala ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಹತ್ಯೆ #Murder in Shivamogga ಪರಿಣಾಮವಾಗಿ ತಡರಾತ್ರಿ ಅಹಿತಕರ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹಳೆ ಶಿವಮೊಗ್ಗ ಭಾಗದ ಕೆಲವು ಪ್ರದೇಶಗಳಲ್ಲಿ ನಿನ್ನೆ ತಡರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಲಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ ಕೂಡ ನಡೆದಿತ್ತು. ಅಲ್ಲದೆ ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಘಟನಾ ಪ್ರದೇಶ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಭದ್ರತೆಗಾಗಿ ಕೆಎಸ್‌ಆರ್‌ಪಿ #KSRP ತುಕಡಿ ರ್‍ಯಾಪಿಡ್ ಅಕ್ಷನ್ ಫೋರ್ಸ್ #Rapid Action Force ತಂಡಗಳನ್ನು ಪ್ರಮುಖ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗಿದ್ದು, ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೆರೆ ಜಿಲ್ಲೆಗಳಿಂದ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Also Read: ಹಂತಕರ ಸುಳಿವು ಸಿಕ್ಕಿದೆ, ಬಂಧಿಸಿ ಹೆಡೆಮುರಿ ಕಟ್ಟುತ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post